ರಾಷ್ಟ್ರೀಯ ಜಲನೀತಿ ರೂಪಿಸಿ : ಸಿಪಿವೈ

Spread the love

yogeshwar

ಚನ್ನಪಟ್ಟಣ, ಸೆ.28- ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಬೇಡ, ರಾಷ್ಟ್ರೀಯ ಜಲನೀತಿ ರೂಪಿಸುವ ಮೂಲಕ ನೀರಿನ ಸಮಸ್ಯೆಯನ್ನು ಬಗೆಹರಿಸಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದರು.ಪಟ್ಟಣದ ಸ್ಪನ್‍ಸಿಲ್ಕ್ ಮಿಲ್‍ನಿಂದ ಗಾಂಧಿಭವನದವರೆಗೆ ಮೆರವಣಿಗೆ ಸಾಗಿ ಕಳೆದ 7 ದಿನಗಳಿಂದ ಪಟ್ಟಣದ ಗಾಂಧಿಭವನದ ಆವರಣದಲ್ಲಿ ನಡೆಸುತ್ತಿದ್ದ ಪ್ರತಿಭಟನೆಗೆ ಅಂತ್ಯವಾಡಿದ ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾವೇರಿ ಕಣಿವೆಯ ಶಾಸಕರು, ಸಂಸದರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದನಾಗಿದ್ದೇನೆ, ಅಗತ್ಯ ಬಿದ್ದರೆ ರಾಜೀನಾಮೆ ನೀಡಲು ಸಿದ್ದನಿದ್ದೇನೆ ಎಂದು ತಿಳಿಸಿದರು.ರೈತಸಂಘದ ಜಿಲ್ಲಾಧ್ಯಕ್ಷ ಕೆ.ಎಸ್.ಲಕ್ಷ್ಮಣಸ್ವಾಮಿ, ಕಾಲೇಜು ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತರು, ಸ್ತ್ರೀಶಕ್ತಿ ಸಂಘಟನೆಯ ಮಹಿಳೆಯರು, ತಾಲೂಕಿನ ವಿವಿದ ಜನಪ್ರತಿನಿಧಿಗಳು, ಕನ್ನಡಪರ ಸಂಘಟನೆಗಳು, ವಿವಿದ ಸಂಘ-ಸಂಸ್ಥೆಗಳ ಕಾರ್ಯಕರ್ತರು ಹಾಜರಿದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin