ರಾಷ್ಟ್ರೀಯ ಸೇವಾ ಯೋಜನೆಯು ಸಂಕಷ್ಟಕ್ಕೆ ಸಿಲುಕಿದವರಿಗೆ ಸಹಾಯ ಮಾಡಲಿದೆ

Spread the love

2

ಮೂಡಲಗಿ,ಸೆ.28- ರಾಷ್ಟ್ರೀಯ ಸೇವಾ ಯೋಜನೆಯು ಕೇವಲ ಕಸ ಕಡ್ಡಿಗಳನ್ನು ತೆಗೆಯುವ ಕೆಲಸ ಮಾತ್ರ ಆಗಿರದೆ, ರಾಷ್ಟ್ರೀಯ ವಿಪತ್ತುಗಳು ಸಂಭವಿಸಿದ ಸಂದರ್ಭಗಳಲ್ಲಿ ಸಂಕಷ್ಟಕ್ಕೆ ಸಿಲುಕಿದ ಜನರಿಗೆ ಸಹಾಯ ಮಾಡುವ ಕೆಲಸ ಕಾರ್ಯಗಳನ್ನು ಸಹ ಒಳಗೊಂಡಿರುತ್ತದೆ ಎಂದು ಪ್ರೊ . ಎಸ್.ಜಿ. ನಾಯಕ ಹೇಳಿದರು.ಅವರು ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ಈಚೆಗೆ ಹಮ್ಮಿಕೊಂಡ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರನ್ನು ಉದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವದ ಬೆಳವಣಿಗೆಯೊಂದಿಗೆ ಸಮಾಜ ಹಾಗೂ ದೇಶದ ಬೆಳವಣಿಗೆಗೆ ಪೂರಕವಾದ ಕೆಲಸ ಮಾಡಬೇಕು ಎಂದರು.

ಅಧ್ಯಕ್ಷತೆ ವಹಿಸಿದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಆರ್.ಎ. ಶಾಸ್ತ್ರೀಮಠ ಮಾತನಾಡಿ, ಸ್ವಯಂ ಸೇವಕರು ವಿಶೇಷ ಶಿಬಿರಗಳಲ್ಲಿ ಭಾಗ ವಹಿಸುವುದರಿಂದ ಬಹುಮುಖ ವ್ಯಕ್ತಿತ್ವವನ್ನು ರೂಪಿಸುಕೊಳ್ಳಬಹುದಾಗಿದೆ ಎಂದರು. ಎನ್‍ಎಸ್‍ಎಸ್ ಕಾರ್ಯಕ್ರಮ ಅಧಿಕಾರಿ ಪೆÇ್ರ. ಜಿ.ವಿ. ನಾಗರಾಜ ಮಾತನಾಡಿ, ಸ್ವಯಂಸೇವಕರನ್ನು ಉದ್ದೇಶಿಸಿ ಗಾಂಧೀಜಿಯವರ ಜನ್ಮ ಶತಮಾನೋತ್ವವದ ಸವಿ ನೆನಪಿಗಾಗಿ ಪ್ರತಿವರ್ಷ ಸೆ. 24ನೇ ದಿನವನ್ನು ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆಯನ್ನಾಗಿ ಆಚರಿಸಲಾಗುವುದು ಹಾಗೂ ಯುವಕರು ಗಾಂಧಿಜೀಯವರು ಕಂಡ ಕನಸನ್ನು ನನಸನ್ನಾಗಿ ಮಾಡುವ ಹೊಣೆ ನಿಮ್ಮ ಮೇಲಿದೆ ಹಾಗೂ ಯುವಕರು ಹಿಂಸಾಚಾರದಲ್ಲಿ ತೊಡಗದೆ ಒಳ್ಳೆಯ ಮಾರ್ಗದಲ್ಲಿ ನಡೆದು ಸುಭದ್ರ ಭಾರತ ದೇಶವನ್ನು ಕಟ್ಟುವಂತವರಾಗಬೇಕೆಂದರು. ವೇದಿಕೆಯಲ್ಲಿ ಉಪನ್ಯಾಸಕರಾದ ಎಸ್.ಸಿ. ಮಂಟೂರ, ಎ.ಪಿ. ರಡ್ಡಿ, ಎಸ್.ಎನ್. ಕೊಕಟನೂರ, ಎಸ್.ಎಂ. ಗುಜಗೊಂಡ, ವಿ.ಆರ್. ದೇವರಡ್ಡಿ ಉಪಸ್ಥಿತರಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin