ರುದ್ರೇಶ್ ಹಂತಕರ ಬಂಧನಕ್ಕೆ ಆಗ್ರಹಿಸಿ ಬಿಜೆಪಿ ಹಾಗೂ ಆರ್‍ಎಸ್‍ಎಸ್ ಮುಖಂಡರ ಪ್ರತಿಭಟನೆ

Spread the love

BJP-Protest
ಬೆಂಗಳೂರು, ಅ.17-ಶಿವಾಜಿನಗರದ ಕಮರ್ಷಿಯಲ್ ಸ್ಟ್ರೀಟ್‍ನಲ್ಲಿ ನಿನ್ನೆ ಆರ್‍ಎಸ್‍ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣ ಖಂಡಿಸಿ ಹಂತಕರ ಬಂಧನಕ್ಕೆ ಆಗ್ರಹಿಸಿ ಬಿಜೆಪಿ ಹಾಗೂ ಆರ್‍ಎಸ್‍ಎಸ್ ಮುಖಂಡರು ಇಂದು ಪ್ರತಿಭಟನೆ ನಡೆಸಿದರು. ಸಂಸದರಾದ ಶೋಭಾ ಕರಂದ್ಲಾಜೆ, ಪಿ.ಸಿ.ಮೋಹನ್, ಮಾಜಿ ಸಚಿವರಾದ ಆರ್.ಅಶೋಕ್, ಸುರೇಶ್‍ಕುಮಾರ್, ಅರವಿಂದ ಲಿಂಬಾವಳಿ, ಕಟ್ಟಾಸುಬ್ರಹ್ಮಣ್ಯ ನಾಯ್ಡು, ನಾರಾಯಣಸ್ವಾಮಿ ಸೇರಿದಂತೆ ಹಲವು ಮುಖಂಡರ ನೇತೃತ್ವದಲ್ಲಿ ಇಂದು ಮೃತ ರುದ್ರೇಶ್‍ನ ಮನೆಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ನಂತರ ಶಿವಾಜಿನಗರ ವೃತ್ತದಲ್ಲಿ ಸಮಾವೇಶಗೊಂಡ ಸಾವಿರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿ ಹತ್ಯೆಯನ್ನು ಖಂಡಿಸಿದರು. ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದರು.

ಶಿವಾಜಿನಗರದಿಂದ ಬಾಳೆಕುಂದ್ರಿ ಸರ್ಕಲ್ ಮೂಲಕ ಪೊಲೀಸ್ ಕಮಿಷನರ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೆÇಲೀಸರು ಬಾಳೆಕುಂದ್ರಿ ಸರ್ಕಲ್ ಬಳಿ ತಡೆದರು.  ಇದಕ್ಕೂ ಮುನ್ನ ಮಾಜಿ ಸಚಿವ ಸುರೇಶ್‍ಕುಮಾರ್ ಮಾತನಾಡಿ, ಹಿಂದೂ ಸಂಘಟನೆಗಳ ಕಾರ್ಯಕರ್ತರ ನಿರಂತರ ಹತ್ಯೆ ನಡೆಯುತ್ತಿದೆ. ಇದಕ್ಕಾಗಿ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ನಮ್ಮನ್ನು ನಾವು ರಕ್ಷಣೆ ಮಾಡಿಕೊಳ್ಳುವ ಸಂಬಂಧ ಹೋರಾಟಕ್ಕಿಳಿದಿದ್ದೇವೆ. ನಿನ್ನೆ ಗಣವೇಶದಲ್ಲಿದ್ದಾಗ ಆರ್‍ಎಸ್‍ಎಸ್ ಕಾರ್ಯಕರ್ತ ರುದ್ರೇಶ್ ಅವರನ್ನು ಹತ್ಯೆ ಮಾಡಲಾಗಿದೆ.  ದೇಶದೆಲ್ಲೆಡೆ ಅಪರಿಚಿತರಿಂದ ಆರ್‍ಎಸ್‍ಎಸ್ ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡುವಂತಹ ಘಟನೆಗಳು ನಡೆಯುತ್ತಿವೆ. ಕರ್ನಾಟಕ ಮತ್ತೊಂದು ಕೇರಳ ಆಗಬಾರದು. ರಾಷ್ಟ್ರ ನಿರ್ಮಾಣಕ್ಕೆ ಜೀವನ ಮುಡುಪಾಗಿಡುವಂತಹ ಕಾರ್ಯಕರ್ತರನ್ನು ಹತ್ಯೆ ಮಾಡಿರುವ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ವಿಳಂಬ ಮಾಡಿದರೆ ಅವರ ಬಗ್ಗೆ ಅನುಮಾನ ಉಂಟಾಗುತ್ತದೆ ಎಂದು ಗುಮಾನಿ ವ್ಯಕ್ತಪಡಿಸಿದರು.

BJP-Protest-3

ಹಂತಕರನ್ನು ಬಂಧಿಸಿ, ಇಲ್ಲದಿದ್ದರೆ ಆರ್‍ಎಸ್‍ಎಸ್ ಬಿಜೆಪಿ ಕಾರ್ಯಕರ್ತರಿಗೆ ತಮ್ಮ ನ್ನು ತಾವು ರಕ್ಷಿಸಿಕೊಳ್ಳಲು ಆಯುಧಗಳನ್ನು ಹೊಂದಲು ಲೈಸೆನ್ಸ್ ಕೊಡಿ ಎಂದು ಸುರೇಶ್‍ಕುಮಾರ್ ಹೇಳಿದರು . ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಎಲ್ಲ ಕೊಲೆಗಳ ಹಿಂದೆ ಷಡ್ಯಂತ್ರವಿದೆ. ಪ್ರಶಾಂತ್ ಪೂಜಾರಿ ಹತ್ಯೆ, ಮಡಿಕೇರಿಯಲ್ಲಿ ಕಟ್ಟಪ್ಪ ಹತ್ಯೆ, ಮೈಸೂರಿನಲ್ಲಿ ರಾಜು ಕೊಲೆ, ಕಾರ್ಪೊರೇಟರ್  ಮಂಜುಳಾ ಶ್ರೀನಿವಾಸ್ ಅವರ ಪತಿ ಹತ್ಯೆ. ಈ ಸರ್ಕಾರಕ್ಕೆ ಇನ್ನೆಷ್ಟು ಬಲಿ ಬೇಕು. ತಿಂಗಳಿಗೊಬ್ಬರಂತೆ ಹತ್ಯೆಯಾಗುತ್ತಿದೆ. ಕೂಡಲೇ ಸರ್ಕಾರ ಹಂತಕರನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಆರ್.ಅಶೋಕ್ ಮಾತನಾಡಿ, ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.   ಸಂಸದ ಪಿ.ಸಿ.ಮೋಹನ್ ಮಾತನಾಡಿ, ಮಂಗಳೂರು, ಬೆಂಗಳೂರು, ಮೈಸೂರು ಎಲ್ಲ ಕಡೆ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆ ಕೆಲಸ ನಡೆಯುತ್ತಿದೆ. ಪೊಲೀಸರು ಸರ್ಕಾರದ ಒತ್ತಡಕ್ಕೆ ಮಣಿಯದಂತೆ ಕೆಲಸ ನಿರ್ವಹಿಸಬೇಕು ಎಂದು ಆಗ್ರಹಿಸಿದರು.

BJP-Protest-1

► Follow us on –  Facebook / Twitter  / Google+

Facebook Comments

Sri Raghav

Admin