ರುದ್ರೇಶ್ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ
ತಿ.ನರಸೀಪುರ, ಅ.18- ಆರ್ಎಸ್ಎಸ್ ಮುಖಂಡ ರುದ್ರೇಶ್ ಹತ್ಯೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.ಪಟ್ಟಣ ಖಾಸಗಿ ಬಸ್ ನಿಲ್ದಾಣದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಧಿಕ್ಕಾರದ ಘೋಷಣೆಯನ್ನು ಕೂಗುತ್ತ ವಿದ್ಯೋದಯ ಕಾಲೇಜು ರಸ್ತೆ ಮಾರ್ಗವಾಗಿ ತಾಲ್ಲೂಕು ಕಚೇರಿ ತಲುಪಿ ಚುನಾವಣಾ ಶಿರಸ್ತೇದಾರ್ ಪ್ರಭುರಾಜ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಪ್ರತಿಭಟನೆ ನೇತೃತ್ವವಹಿಸಿ ಮಾತನಾಡಿದ ಬಿಜೆಪಿ ತಾಲ್ಲೂಕು ಯುವ ಮೋರ್ಚಾ ಅಧ್ಯಕ್ಷ ಆರ್.ಮಣಿಕಂಠರಾಜ್ಗೌಡ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದ ಕೆಲವೇ ದಿನಗಳಲ್ಲಿ ಆರ್ಆರ್ಎಸ್, ಬಿಜೆಪಿ ಮುಖಂಡರ ಹತ್ಯೆ ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಗಂಭೀರ ಆರೋಪ ಮಾಡಿದರು.
ಕ್ಷೇತ್ರಾಧ್ಯಕ್ಷ ಹಿರಿಯೂರು ಪರಶಿವಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಣೀಶ್, ಕಾರ್ಮಲ್ಲಪ್ಪ, ಯೋಗೇಶ್, ಜಿಲ್ಲಾ ಹಿಂದುಳಿದ ವರ್ಗದ ಅಧ್ಯಕ್ಷ ವೆಂಕಟರಮಣಶೆಟ್ಟಿ, ತಾ.ಪಂ ಸದಸ್ಯ ರಮೇಶ್, ಕರೋಹಟ್ಟಿ ಮಹದೇವಯ್ಯ, ದೀಲೀಪ್, ಮಹದೇವಯ್ಯ, ಮಿಥುನ್, ನಾಗರಾಜು(ತಾತಪ್ಪ), ರೇವಣ್ಣ, ಜಿಲ್ಲಾ ಉಪಾಧ್ಯಕ್ಷ ನಂಜುಂಡಸ್ವಾಮಿ, ಗೀರಿಶ್, ಬಸವರಾಜು, ಮೂಗೂರು ರೇವಣ್ಣ, ಸಿದ್ದರಾಜು ಮತ್ತಿತರರು ಹಾಜರಿದ್ದರು.ರಸ್ತೆತಡೆ: ಇದೇ ವಿಚಾರವಾಗಿ ರಾಷ್ಟ್ರೀಯ ಹೆದ್ದಾರಿ 212 ರ ಕೊಳ್ಳೇಗಾಲ- ಮೈಸೂರು ಮುಖ್ಯರಸ್ತೆಯ ಆಲಗೂಡು ಗ್ರಾಮದಲ್ಲಿ ಬಿಜೆಪಿ ಎಸ್ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಂಗೂನಾಯಕ್ ಹಾಗೂ ಹಿಂದುಳಿದ ವರ್ಗ ಜಿಲ್ಲಾಧ್ಯಕ್ಷ ವೆಂಕಟರಮಣಶೆಟ್ಟಿ ನೇತೃತ್ವದಲ್ಲಿ ರಸ್ತೆ ಸಂಚಾರಕ್ಕೆ ತಡೆಯೊಡ್ಡಿ ಅರ್ಧ ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಲಾಯಿತು.
► Follow us on – Facebook / Twitter / Google+