ಲೋಕಸಭೆಯಲ್ಲಿ ಪ್ರತಿಧ್ವನಿಸಿತು ಕೇರಳದ ಹಿಂಸಾಚಾರ

Spread the love

Loksabha--01

ನವದೆಹಲಿ, ಆ.3-ಕೇರಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯತ್ತಿರುವ ಹಿಂಸಾಚಾರ ಪ್ರಕರಣಗಳು ಲೋಕಸಭೆಯಲ್ಲಿ ಇಂದು ಪ್ರತಿಧ್ವನಿಸಿತು. ಆಡಳಿತರೂಢ ಬಿಜೆಪಿ ಮತ್ತು ಎಡ ಪಕ್ಷಗಳ ಸದಸ್ಯರ ನಡುವೆ ಈ ವಿಷಯದಲ್ಲಿ ವಾದ-ವಾಗ್ವಾದದಿಂದ ಸದನದಲ್ಲಿ ಭಾರೀ ಗದ್ದಲ ಮತ್ತು ಕೋಲಾಹಲ ಸೃಷ್ಟಿಯಾಗಿ ಕಲಾಪವನ್ನು ಕೆಲಕಾಲ ಮುಂದೂಡಲಾಯಿತು.

ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಕೇರಳದ ಸದಸ್ಯರು ರಾಜ್ಯದಲ್ಲಿ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ಮತ್ತು ಹತ್ಯೆ ಪ್ರಕರಣಗಳು ಮುಂದುವರಿದಿದೆ. ಪಕ್ಷದ ಕಚೇರಿಗಳ ಮೇಲೆ ಸಿಪಿಎಂ ದಾಳಿ ನಡೆಸಿದೆ ಎಂದು ಆರೋಪಿಸಿದಾಗ ಎಡ ಪಕ್ಷಗಳ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ ವಾದಕ್ಕೀಳಿದರು. ಈ ಸಂದರ್ಭದಲ್ಲಿ ಮಾತಿನ ಚಕಮಕಿಯಿಂದ ಗದ್ದಲ ಸೃಷ್ಟಿಯಾಯಿತು. ಎರಡೂ ಪಕ್ಷಗಳ ಸದಸ್ಯರನ್ನು ಸಮಾಧಾನಪಡಿಸಲು ಯತ್ನಿಸಿದ ಸಭಾಧ್ಯಕ್ಷೆ ಸುಮಿತ್ರಾ ಮಹಾಜನ್ ಪರಿಸ್ಥಿತಿ ಮುಂದುವರಿದ ಕಾರಣ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin