ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನಾದ್ಯಂತ ತುಂತುರು ಮಳೆ

Weather--02

ಬೆಂಗಳೂರು, ನ.30-ತ್ರೀವ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣವಿದ್ದು , ತುಂತುರು ಮಳೆ ಮುಂದುವರೆಯುವ ಸಾಧ್ಯತೆಗಳಿವೆ. ಇನ್ನು ಎರಡು ದಿನಗಳ ಕಾಲ ತಂಪಾದ ಮೇಲ್ಮೈ ಗಾಳಿ ಹೆಚ್ಚಾಗಲಿದೆ ಹಾಗೂ ಮೋಡ ಕವಿದ ವಾತಾವರಣ ಕಂಡುಬರಲಿದ್ದು , ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ ರೆಡ್ಡಿ ತಿಳಿಸಿದರು.

ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ ಕನ್ಯಾಕುಮಾರಿ ಬಳಿ ಇದೆ. ಅರಬ್ಬೀ ಸಮುದ್ರದ ಕಡೆ ಚಲಿಸುತ್ತಿರುವುದರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಆದರೆ ಭಾರೀ ಮಳೆಯಾಗುವ ಮುನ್ಸೂಚನೆಗಳಿಲ್ಲ. ತೀವ್ರ ವಾಯುಭಾರ ಕುಸಿತದಿಂದಾಗಿ ಕೇರಳ ಹಾಗೂ ತಮಿಳುನಾಡಿನ ದಕ್ಷಿಣ ಭಾಗದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹೇಳಿದರು. ತಂಪಾದ ಮೇಲ್ಮೈ ಗಾಳಿ ಹೆಚ್ಚಾಗಿರುವುದರಿಂದ ಹಗಲಿನಲ್ಲೂ ಚಳಿ ಹೆಚ್ಚಾಗಿ ಕಂಡುಬರಲಿದೆ ಎಂದರು.

Sri Raghav

Admin