ವಿಧಾನಸೌಧ ನಿರ್ಮಾಣ ಸಂದರ್ಭದಲ್ಲೂ ವಿರೋಧ ವ್ಯಕ್ತವಾಗಿತ್ತು : ಡಿಕೆಶಿ

Spread the love

dk--shivakumar

ಬೆಂಗಳೂರು, ಅ.22 –ವಿಧಾನಸೌಧ ನಿರ್ಮಿಸುವ ಸಂದರ್ಭದಲ್ಲಿ ಕೆಂಗಲ್ ಹನುಮಂತಯ್ಯನವರ ಮೇಲೂ ಹಲ್ಲೆಯಾಗಿತ್ತು. ಯಾವುದೇ ಮಹತ್ಕಾರ್ಯಗಳನ್ನು ಮಾಡುವಾಗ ವಿರೋಧವಾಗುವುದು ಬರುವುದು ಸಹಜ ಎಂದು ಸ್ಟೀಲ್ ಬ್ರಿಡ್ಜ್ ಬಗ್ಗೆ ವಿರೋಧ ವ್ಯಕ್ತವಾಗಿರುವುದಕ್ಕೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಈ ರೀತಿ ಪ್ರತಿಕ್ರಿಯಿಸಿದ್ದಾರೆ.ಪ್ರೆಸ್‍ಕ್ಲಬ್‍ನಲ್ಲಿಂದು ಏರ್ಪಡಿಸಿದ್ದ ಪತ್ರಿಕಾ ಸಂವಾದದಲ್ಲಿ ಮಾತನಾಡಿದ ಅವರು, ಸ್ಟೀಲ್ ಬ್ರಿಡ್ಜ್ ಸಂಬಂಧ ವಿರೋಧಗಳು ವ್ಯಕ್ತವಾಗುವುದು ಸಹಜ. ಹಾಗೆಂದ ಮಾತ್ರಕ್ಕೆ ಅಭಿವೃದ್ಧಿ ಕೆಲಸಗಳನ್ನು ಸ್ಥಗಿತಗೊಳಿಸಲಾಗುವುದಿಲ್ಲ ಎಂದು ಹೇಳಿದರು.

ನನ್ನಿಂದ ಕಾಂಗ್ರೆಸ್ ಹಾಳಾಯಿತು ಎಂದು ಕಾಂಗ್ರೆಸ್‍ಗೆ ರಾಜೀನಾಮೆ ನೀಡಿರುವ ಶ್ರೀನಿವಾಸ್‍ಪ್ರಸಾದ್ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಅವರು ಹಿರಿಯ ನಾಯಕರು ಎಂದಷ್ಟೇ ಹೇಳಿದರು.ಶ್ರೀನಿವಾಸ್‍ಪ್ರಸಾದ್ ಅವರ ರಾಜೀನಾಮೆ ಅಂಗೀಕಾರವಾಗಿರುವ ಬಗ್ಗೆ ನನಗೆ ಗೊತ್ತಿಲ್ಲ. ಈ ಸಂದರ್ಭದಲ್ಲಿ ನಾನು ಏನೂ ಹೇಳುವುದಿಲ್ಲ ಎಂದು ತಿಳಿಸಿದರು.

 

► Follow us on –  Facebook / Twitter  / Google+

Facebook Comments

Sri Raghav

Admin