ವಿಳಾಸದ ನೆಪದಲ್ಲಿ ಮಾಂಗಲ್ಯಸರ ಕಸಿದು ಪರಾರಿ

chain--snacher

ಮಂಡ್ಯ,ಸೆ.2- ವಿಳಾಸ ಕೇಳುವ ನೆಪದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಹಿಳೆಯ 45 ಗ್ರಾಂ ಚಿನ್ನದ ಮಾಂಗಲ್ಯ ಸರ ಎಗರಿಸಿ ಪರಾರಿಯಾಗಿರುವ ಘಟನೆ ಶ್ರೀರಂಗಪಟ್ಟಣ ಟೌನ್‍ನಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ಪೂರ್ಣಯ್ಯ ಬೀದಿಯಲ್ಲಿರುವ ನಿವಾಸಿ ವೀಣಾ ಮಾಂಗಲ್ಯ ಕಳೆದುಕೊಂಡ ಮಹಿಳೆ. ಇಂದು ಬೆಳಗ್ಗೆ ಕಸ ಹಾಕಲು ಮನೆಯಿಂದ ಹೊರಗೆ ಬಂದ ವೀಣಾರನ್ನು ಗಮನಿಸಿದ ದುಷ್ಕರ್ಮಿಗಳು ಇವರ ಬಳಿ ಬಂದು ವಿಳಾಸ ಕೇಳಿದ್ದಾರೆ. ಆಕೆ ವಿಳಾಸ ಹೇಳಲು ಮುಂದಾಗುತ್ತಿದ್ದಂತೆ ಆಕೆಯ ಕತ್ತಿನಲ್ಲಿದ್ದ 45 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಕೆಲವೇ ಸೆಕೆಂಡ್‍ಗಳಲ್ಲಿ ಅಲ್ಲಿಂದ ಪರಾರಿಯಾಗಿದ್ದಾರೆ. ಇದರಿಂದ ಭಯಭೀತಳಾದ ವೀಣಾ ತನ್ನ ಗಂಡನಿಗೆ ವಿಷಯ ತಿಳಿಸಿದ್ದಾಳೆ. ನಂತರ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು , ಪೊಲೀಸರು ತನಿಖೆ ಆರಂಭಿಸಿದ್ದಾರೆ.

 

► Follow us on –  Facebook / Twitter  / Google+

Sri Raghav

Admin