ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕ್ಷಣಗಣನೆ

Spread the love

Mysuru

ಮೈಸೂರು,ಸೆ.20-ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕ್ಷಣಗಣನೆ ಆರಂಭಗೊಂಡಿದೆ. ನಾಳೆ ನಿತ್ಯೋತ್ಸವ ಕವಿ ಕೆ.ಎಸ್.ನಿಸಾರ್ ಅಹಮದ್ ಅವರು ಚಾಮುಂಡಿ ಬೆಟ್ಟದಲ್ಲಿ ದಸರಾ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ನಾಳೆ ಬೆಳಿಗ್ಗೆ ಚಾಮುಂಡಿ ಬೆಟ್ಟದಲ್ಲಿ ನಾಡ ದೇವತೆ ಚಾಮುಂಡೇಶ್ವರಿಗೆ ತುಲಾ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ನವರಾತ್ರಿಗೆ ಚಾಲನೆ ನೀಡಲಾಗುವುದು. 10 ದಿನಗಳ ಕಾಲ ಪ್ರತಿನಿತ್ಯ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯ ಅತಿಥಿಯಾಗಿರುತ್ತಾರೆ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹಾದೇವಪ್ಪ , ಶಾಸಕ ಜಿ.ಟಿ.ದೇವೇಗೌಡ ಸೇರಿದಂತೆ ಮತ್ತಿತರ ಗಣ್ಯರು ನಾಡಹಬ್ಬಕ್ಕೆ ಸಾಕ್ಷಿಯಾಗಲಿದ್ದಾರೆ.  ದೇಶ-ವಿದೇಶಗಳ ಸಾವಿರಾರು ಪ್ರವಾಸಿಗರು ಮೈಸೂರಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಬಿಗಿಪೆÇಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಪೊಲೀಸ್ ಸಹಾಯವಾಣಿ, ಕಲಾ ಪ್ರದರ್ಶನದ ಶಿಬಿರಗಳು, ಕ್ರೀಡಾ ಜ್ಯೋತಿ, ಮಹಿಳಾ ಸಂಘಟನೆಗಳ ಉತ್ಪನ್ನಗಳ ವಸ್ತು ಪ್ರದರ್ಶನ ಮಾರಾಟ ಮೇಳ. ಕಲಾ ಮಂದಿರದಲ್ಲಿ ಚಲನಚಿತ್ರೋತ್ಸವ ನಡೆಯಲಿದೆ.

ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಮೈದಾನದಲ್ಲಿ ಆರಂಭವಾಗಲಿರುವ ಆಹಾರ ಮೇಳ, ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ನಡೆಯಲಿರುವ ದಸರಾ ಕುಸ್ತಿ ಪಂದ್ಯಾವಳಿ, ದಸರಾ ವಸ್ತು ಪ್ರದರ್ಶನ, ದಸರಾ ಸಾಂಸ್ಕøತಿಕ ಸೇರಿದಂತೆ ಮತ್ತಿತರ ಕಾರ್ಯಕ್ರಮಗಳನ್ನು ನಾಳೆ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.

ದಸರಾ ಹಿನ್ನೆಲೆ:

ಸಾಂಸ್ಕøತಿಕವಾಗಿ, ಸಾಮಾಜಿಕವಾಗಿ ಅತ್ಯಂತ ವೇಗವಾಗಿ ಬೆಳೆದ ಪ್ರಾಂತ್ಯ ಮೈಸೂರು ರಾಜ್ಯ, ವಿಜಯನಗರ ಅರಸರ ಕಾಲದ ದಸರಾ ಆಚರಣೆಯನ್ನು ಮೈಸೂರು ಅರಸರು ಸಂಭ್ರಮದಿಂದ ಆಚರಿಸಿಕೊಂಡು ಬಂದಿದ್ದಾರೆ.  ದಸರಾ ಉತ್ಸವ ಹತ್ತು ದಿನಗಳ ಸುದೀರ್ಘ ಹಬ್ಬ. ಈ ಹಬ್ಬವನ್ನು ತಾಯಿ ಚಾಮುಂಡೇಶ್ವರಿ ಮಹಿಷಾಸುರನನ್ನು ಸಂಹರಿಸಿದ ವಿಜಯ ದಿನದ ಸಂಕೇತವಾಗಿ ಆಚರಿಸಿಕೊಂಡು ಬರಲಾಗುತ್ತದೆ.   ದಸರಾ ದಿನಗಳಂದು ಅರಮನೆಯ ದರ್ಬಾರ್ ಹಾಲ್‍ನಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ವಿಜಯದಶಮಿಯಂದು ತಾಯಿ ಚಾಮುಂಡಿ ದೇವಿಯನ್ನು ಹೊತ್ತ ಅರ್ಜುನ ಇತರ 10-12 ಆನೆಗಳೊಂದಿಗೆ ವಿವಿಧ ಜಾನಪದ ಕಲಾತಂಡಗಳು, ನಾಡಿನ ಸಂಸ್ಕøತಿ, ಅಭಿವೃದ್ಧಿ ಸಂಕೇತಿಸುವ ಸ್ತಬ್ಧಚಿತ್ರಗಳು, ವಾದಮೃದಂಗಗಳು, ಪೊಲೀಸ್ ಹಾಗೂ ಸೈನಿಕ ದಳದೊಂದಿಗೆ ನಗರದ ರಾಜಬೀದಿಗಳಲ್ಲಿ ನಡೆಯುವುದನ್ನು ನೋಡಿದರೆ ಹಿಂದಿನ ಗತವೈಭವ ಕಣ್ಣ ಮುಂದೆ ಪ್ರತ್ಯಕ್ಷವಾಗುತ್ತದೆ.

ದಸರಾ ಹೈಲೈಟ್ಸ್: ಜಂಬೂಸವಾರಿ, ಪಂಜಿನ ಕವಾಯತು, ಮಹರಾಜರ ದರ್ಬಾರ್ ಮೈಸೂರು ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾಗಿದೆ. ಇದೇ ಪ್ರಥಮ ಬಾರಿಗೆ ಮಧುವಣಗಿತ್ತಿಯಂತೆ ಸಿಂಗಾರಗೊಂಡಿರುವ ಮೈಸೂರು ಮಹಾನಗರವನ್ನು ಬಾನಂಗಳದಿಂದ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಹೆಲಿಕಾಪ್ಟರ್ ರೈಡ್ ಮೂಲಕ ಮಹಾನಗರ ವೀಕ್ಷಿಸಲು ಜಿಲ್ಲಾಡಳಿತ ಅವಕಾಶ ಮಾಡಿಕೊಟ್ಟಿರುವುದು ಈ ಬಾರಿಯ ಮತ್ತೊಂದು ಹೈಲೈಟ್ಸ್ .

ಇದರ ಜೊತೆಗೆ ಆಹಾರ ಮೇಳ, ರಾಜ್ಯ ದಸರಾ ಕ್ರೀಡಾ ಕೂಟ, ಅರಮನೆ ವೇದಿಕೆ ಸಾಂಸ್ಕøತಿಕ ಕಾರ್ಯಕ್ರಮಗಳು, ಯುವಸಂಭ್ರಮ, ದಸರಾ ಚಲನಚಿತ್ರೋತ್ಸವ, ಕವಿಗೋಷ್ಠಿ, ರೈತ ದಸರಾ, ಯೋಗ ದಸರಾ, ದಸರಾ ಕುಸ್ತಿ, ತ್ರಿಡಿ ಪ್ರೊಜೆಕ್ಷನ್ ಮ್ಯಾಪಿಂಗ್, ಗಜಪಡೆಗೆ ಸ್ವಾಗತದಂತಹ ಹಲವಾರು ಕಾರ್ಯಕ್ರಮಗಳು ಪ್ರವಾಸಿಗರ ಕಣ್ಮನ ಸೆಳೆಯಲಿವೆ.

Facebook Comments

Sri Raghav

Admin