ವೇಗವಾಗಿ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‍ಗೆ ಡಿಕ್ಕಿ

Spread the love

accident

ಶ್ರೀರಂಗಪಟ್ಟಣ , ಸೆ.26- ವೇಗವಾಗಿ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‍ಗೆ ಡಿಕ್ಕಿ ಹೊಡೆದು ಮುಂದಕ್ಕೆ ನುಗ್ಗಿ ಎದುರುಗಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ನಗುವನಹಳ್ಳಿ ಗೇಟ್ ಬಳಿ ಸಂಭವಿಸಿದೆ.ಶುಭಮಂಗಳ (44) ಗಾಯಗೊಂಡಿರುವ ಮಹಿಳೆ.ನಿನ್ನೆ ರಾತ್ರಿ ಮೈಸೂರಿನಿಂದ ಬೆಂಗಳೂರಿಗೆ ಪ್ರಸಾದ್ ಹಾಗೂ ಪತ್ನಿ ಶುಭಮಂಗಳ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ಸಂದರ್ಭದಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಸ್ವಾಗತ್ ಎಂಬುವವರ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‍ಗೆ ಡಿಕ್ಕಿ ಹೊಡೆದು ಮುಂದಕ್ಕೆ ನುಗ್ಗಿ ಪ್ರಸಾದ್ ಕಾರಿಗೆ ಡಿಕ್ಕಿ ಹೊಡೆದಿದೆ.
ಈ ಅಪಘಾತದಲ್ಲಿ ಪ್ರಸಾದರ ಪತ್ನಿ ಶುಭಮಂಗಳ ಗಂಭೀರವಾಗಿ ಗಾಯಗೊಂಡಿದ್ದು ಕೂಡಲೇ ಅವರನ್ನು ಹತ್ತಿರದ ಪ್ರಾಥಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಯೊಂದಕ್ಕೆ ಕರೆದೊಯ್ದಿದ್ದಾರೆ.ಈ ಸಂಬಂಧ ಶ್ರೀರಂಗಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

 

► Follow us on –  Facebook / Twitter  / Google+

 

 

Facebook Comments

Sri Raghav

Admin