ಶಂಕರಾಚಾರ್ಯರ ತತ್ವಾದರ್ಶ ಪಾಲಿಸಿ

beluru-4

ಬೇಲೂರು, ಮೇ 2- ಶ್ರೀ ಶಂಕರಾಚಾರ್ಯರ ತತ್ವ ಆದರ್ಶಗಳು ಎಂದೆಂದಿಗೂ ಪ್ರಸ್ತುತವಾಗಿದೆ. ಇವರ ತತ್ವ ಆದರ್ಶವನ್ನು ಅರಿತು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ತಮ್ಮ ಸಂಸ್ಕೃತಿ ಸಂಸ್ಕಾರವನ್ನು ಉಳಿಸಿ ಬೆಳೆಸುವುದಕ್ಕೆ ಪ್ರತಿಯೊಬ್ಬರು ಮುಂದಾಗಬೇಕು ಎಂದು ವೇದಬ್ರಹ್ಮ ಕೆ.ಆರ್.ಮಂಜುನಾಥ್ ತಿಳಿಸಿದರು.ಶ್ರೀ ಶಂಕರಾಚಾರ್ಯರ ಜಯಂತಿ ಅಂಗವಾಗಿ ಇಲ್ಲಿನ ಶಾರದ ಪೀಠಂನಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು.ಶ್ರೀ ಶಂಕರಾಚಾರ್ಯರ ಜಯಂತಿ ಅಂಗವಾಗಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹಾಗೂ ವಿಪ್ರ ಮಹಿಳಾ ಒಕ್ಕೂಟದ ವತಿಯಿಂದ ಶ್ರೀ ಶಂಕರಾಚಾರ್ಯರ ಭಾವ ಚಿತ್ರವನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ತಾಲೂಕು ಅಧ್ಯಕ್ಷ ವಿಜಯಕೇಶವ, ಮಠಮುದ್ರೆ ತೋ.ಚ.ನರಸಿಂಹಮೂರ್ತಿ, ತೋ.ಚ.ಅನಂತಸುಬ್ಬರಾಯ, ನಾಗಣ್ಣ ಇನ್ನಿತರರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin