ಶಾಲಾ ಬಸ್ ಡಿಕ್ಕಿ : ದ್ವಿಚಕ್ರ ವಾಹನ ಸವಾರ ಸಾವು
ಬಾಗೇಪಲ್ಲಿ, ಫೆ.10- ವೇಗವಾಗಿ ಚಲಿಸುತ್ತಿದ್ದ ಶಾಲಾ ಬಸ್ಸು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಸವಾರ ಮೃತ ಪಟ್ಟಿರುವ ಘಟನೆ ತಾಲ್ಲೂಕಿನ ಚೇಳೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಆಂಧ್ರಪ್ರದೇಶದ ಕಂದಕೂರು ಗ್ರಾಮದ ರಾಮಶಾಸ್ತ್ರಿ(75) ಎಂದು ಗುರುತಿಸಲಾಗಿದೆ.ತಮ್ಮ ಗ್ರಾಮದಿಂದ ಚೇಳೂರಿಗೆ ಟಿವಿಎಸ್ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಚೇಳೂರಿನ ಎಪಿಎಂಸಿ ಯಾರ್ಡ್ ಮುಂಭಾಗದಲ್ಲಿ ಚೇಳೂರಿನ ಖಾಸಗಿ ಶಾಲೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದು ಚೇಳೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಚಿಂತಾಮಣಿಗೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಅಪಘಾತವೆಸಗಿದ ಬಸ್ ಚಾಲಕ ಅಲ್ಲಿಂದ ಪರಾರಿಯಾಗಿದ್ದು, ಈ ಸಂಬಂಧ ಚೇಳೂರು ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
< Eesanje News 24/7 ನ್ಯೂಸ್ ಆ್ಯಪ್ >