ಶಿಕ್ಷಣದ ಅಭಿವೃದ್ಧಿಗೆ ಶ್ರಮಿಸುವೆ

Kkr--pete2

ಕೆ.ಆರ್.ಪೇಟೆ, ಫೆ.3- ಗ್ರಾಮೀಣ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ರಸ್ತೆ, ವಿದ್ಯುತ್, ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ನನ್ನ ಅಧಿಕಾರದ ಅವಧಿಯಲ್ಲಿ ಹೆಚ್ಚು ಶ್ರಮಿಸುತ್ತಿದ್ದೇನೆ ಎಂದು ಶಾಸಕ ನಾರಾಯಣಗೌಡ ಹೇಳಿದರು. ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಕೈಗೋನಹಳ್ಳಿ ಗ್ರಾಮದಲ್ಲಿ ಗ್ರಾಮವಿಕಾಸ ಯೋಜನೆಯಡಿಯಲ್ಲಿ 62.50 ಲಕ್ಷ ರೂ.ಗಳ ವೆಚ್ಚದಲ್ಲಿ ಹಮ್ಮಿಕೊಂಡಿರುವ ಅಭಿವೃದ್ಧಿ ಕೆಲಸ-ಕಾರ್ಯಗಳಿಗೆ ಭುಮಿ ಪೂಜೆಯನ್ನು ನೆರವೇರಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.ಕುಗ್ರಾಮವಾದ ಕೈಗೋನಹಳ್ಳಿ ಗ್ರಾಮದಲ್ಲಿ ಹುಟ್ಟಿ ಬೆಳೆದು ಬಡತನ ಮತ್ತು ಗ್ರಾಮೀಣ ಜನರ ಬದುಕನ್ನು, ಕಷ್ಟ-ಸುಖಗಳನ್ನು ಹತ್ತಿರದಿಂದ ಬಲ್ಲವನಾಗಿದ್ದೇನೆ. ತಾಲೂಕಿನಲ್ಲಿ ಸುಮಾರು 12 ವರ್ಷಗಳಿಂದ ಸಮಾಜ ಸೇವೆ ಸಲ್ಲಿಸಿದ ಪರಿಣಾಮ ನನ್ನನ್ನು ಶಾಸಕನನ್ನಾಗಿ ಮಾಡಿದ್ದೀರಿ. ಹಾಗಾಗಿ ನನ್ನ ಹುಟ್ಟೂರು ಸೇರಿದಂತೆ ತವರು ತಾಲೂಕಿನ ಸಮಗ್ರ ಅಭಿವೃದ್ಧಿಗೆ ದುಡಿಯುವ ಅವಕಾಶ ಸಿಕ್ಕಿದೆ.

ಇದನ್ನು ಸದ್ಬಳಕೆ ಮಾಡಿಕೊಂಡು ತಾಲೂಕಿನ ಋಣವನ್ನು ತೀರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದರು.ಭೂಸೇನಾ ನಿಗಮವು ಕಾಮಗಾರಿಯ ಗುತ್ತಿಗೆಯನ್ನು ನಿರ್ವಹಿಸುತ್ತಿದ್ದು ಕಾಮಗಾರಿಯ ಗುಣಮಟ್ಟವು ಉತ್ತಮವಾಗಿರುವಂತೆ ಸಾರ್ವಜನಿಕರು ಹಾಗೂ ಗ್ರಾಮಸ್ಥರು ಕಾಳಜಿ ವಹಿಸಬೇಕು ಎಂದು ಶಾಸಕರು ಮನವಿ ಮಾಡಿದರು. ಜಿಪಂ ಅಧ್ಯಕ್ಷೆ ಜೆ.ಪ್ರೇಮಕುಮಾರಿ, ಉಪಾಧ್ಯಕ್ಷೆ ಗಾಯತ್ರಿರೇವಣ್ಣ, ಸದಸ್ಯರಾದ ಬಿ.ಎಲ್.ದೇವರಾಜು, ಹೆಚ್.ಟಿ.ಮಂಜು, ರಾಮದಾಸ್, ಜಿ.ಪಂ. ಮಾಜಿ ಸದಸ್ಯ ವಿ.ಮಂಜೇಗೌಡ, ತಾ.ಪಂ ಉಪಾಧ್ಯಕ್ಷ ಜಾನಕೀರಾಂ, ಸ್ಥಾಯಿ ಸಮಿತಿಯ ಅಧ್ಯಕ್ಷ ವಿಜಯಕುಮಾರ್, ಸದಸ್ಯರಾದ ರಾಜಾಹುಲಿ ದಿನೇಶ್, ಮಲ್ಲೇನಹಳ್ಳಿ ಮೋಹನ್, ರಾಜು, ಖಲೀಲ್ ಬಾಬು, ಸಾರಂಗಿ ಗ್ರಾಪಂ ಅಧ್ಯಕ್ಷೆ ಜಯಮ್ಮ, ಉಪಾಧ್ಯಕ್ಷ ಮರಿಸ್ವಾಮಿಗೌಡ, ಸದಸ್ಯರಾದ ರವಿ, ಧರ್ಮ, ಸತೀಶ್, ಮುಖಂಡರಾದ ಮುದ್ದಪ್ಪ, ಕುಮಾರ್, ಮರೀಗೌಡ, ನಂಜುಂಡೇಗೌಡ, ಈರಪ್ಪ, ಭೂಸೇನಾ ನಿಗಮದ ಕಾರ್ಯಪಾಲಕ ಎಂಜಿನಿಯರ್ ಡಿ.ಮಲ್ಲಪ್ಪ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅಮರನಾಥ್, ಸಿದ್ಧಲಿಂಗಪ್ಪ, ಪಿಡಿಒ ಗಂಟಯ್ಯ, ಪ್ರಥಮದರ್ಜೆ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Sri Raghav

Admin