ಶೀಘ್ರದಲ್ಲೇ ಅಮ್ಮ ಮತ್ತೆ ‘ದರ್ಬಾರ್’ ನಡೆಸಲಿದ್ದಾರೆ

jaya

ಚೆನ್ನೈ, ನ.2- ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದು, ಶೀಘ್ರವೇ ಅವರು ಕಾರ್ಯನಿರ್ವಹಿಸಲಿದ್ದಾ ರೆ ಎಂದು ಪಕ್ಷದ ಪ್ರಮುಖರು ಆಶಾಭಾವನೆ ವ್ಯಕ್ತಪಡಿಸಿದ್ದಾರೆ.ಎಐಎಡಿಎಂಕೆ ಪಕ್ಷದ ವಕ್ತಾರ ಸಿಪೊನ್ನಯನ್ ಹೇಳಿರುವಂತೆ ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಯಲಲಿತಾ ಅವರ ಆರೋಗ್ಯದಲ್ಲಿ ಉತ್ತಮವಾದ ಸುಧಾರಣೆ ಕಂಡುಬಂದಿದೆ. ಜಯಲಲಿತಾ ಅವರು ಶೀಘ್ರವೇ ಗುಣಮುಖರಾಗಿ ಕಾರ್ಯನಿರ್ವಹಿಸಲಿದ್ದಾರೆ. ಅವರಿಗೆ ಫಿಜಿಯೋಥೆರಪಿ ಇನ್ನಿತರ ಚಿಕಿತ್ಸೆಗಳನ್ನು ಮುಂದುವರೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಜಯಲಲಿತಾ ಅವರು ಚಿಕಿತ್ಸೆ ಪಡೆದು ಕೊಳ್ಳು ತ್ತಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಅವರು ತಿಳಿಸಿದ್ದಾರೆ. ಸೆಪ್ಟಂಬರ್ 22ರಂದು ಚೆನ್ನೈನ ಅಪೊಲೊ ಆಸ್ಪತ್ರೆಗೆ ದಾಖಲಾಗಿರುವ ಜಯಲಲಿತಾ ಅವರಿಗೆ, ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.ಅನೇಕ ಗಣ್ಯರು ಆಸ್ಪತ್ರೆಗೆ ತೆರಳಿ ಅವರ ಆರೋಗ್ಯ ವಿಚಾರಿಸಿದ್ದಾರೆ.ಜಯಲಲಿತಾ ಅವರ ಅನುಪಸ್ಥಿತಿಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಪನ್ನೀರ್ ಸೆಲ್ವಂ ಆಡಳಿತ ನಡೆಸುತ್ತಿದ್ದಾರೆ. ಶೀಘ್ರವೇ ಜಯಲಲಿತಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಹೇಳಲಾಗಿದೆ.

 

► Follow us on –  Facebook / Twitter  / Google+

Sri Raghav

Admin