ಶ್ರೀನಿವಾಸ್ ಪ್ರಸಾದ್ ರಾಜೀನಾಮೆ ಅಂಗೀಕರಿಸಿದ ಸ್ಪೀಕರ್ ಕೋಳಿವಾಡ

Spread the love

Srinivas-P

ಬೆಂಗಳೂರು ಅ.20 : ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡು ರಾಜೀನಾಮೆ ನೀಡಿದ್ದ ಮೈಸೂರು ಜಿಲ್ಲೆ ನಂಜನಗೂಡು ಕ್ಷೇತ್ರದ ಶಾಸಕ ಶ್ರೀನಿವಾಸ್ ಪ್ರಸಾದ್ ಅವರ ರಾಜೀನಾಮೆಯನ್ನು ಅಂಗೀಕರಿಸಿರುವುದಾಗಿ ಸ್ಪೀಕರ್ ಕೆಬಿ ಕೋಳಿವಾಡ ತಿಳಿಸಿದ್ದಾರೆ. ಅಕ್ಟೋಬರ್ 17ರಂದು ಶ್ರೀನಿವಾಸ್ ಪ್ರಸಾದ್ ಅವರು ಹಸ್ತಾಕಾಶರಾದಲ್ಲಿ ಬರೆದು ಸ್ಪೀಕರ್ ಕೋಳಿವಾಡ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಸಂವಿಧಾನದ ಅನುಚ್ಛೇದ 190(3)(ಬಿ)ಅಡಿಯಲ್ಲಿ ರಾಜೀನಾಮೆ ಅಂಗೀಕರಿಸಿರುವುದಾಗಿ ಸ್ಪೀಕರ್ ವಿಧಾನಸೌಧದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

► Follow us on –  Facebook / Twitter  / Google+

Facebook Comments

Sri Raghav

Admin