ಶ್ವೇತಭವನದಲ್ಲಿ ದೀಪಾವಳಿ ಆಚರಿಸಿದ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮಾ

Spread the love

Obama-02

ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮಾ ಶ್ವೇತ ಭವನದಲ್ಲಿ ಭಾರತೀಯ ಮೂಲದ ಅಮೆರಿಕಾ ವಾಸಿಗಳ ಸಮ್ಮುಖದಲ್ಲಿ ದೀಪ ಬೆಳಗಿಸಿ ದೀಪಾವಳಿಯನ್ನು ಆಚರಿಸಿದ್ದಾರೆ. 2009 ರಲ್ಲಿ ಬರಾಕ್ ಒಬಾಮಾ, ಶ್ವೇತ ಭವನದಲ್ಲಿ ದೀಪಾವಳಿಯನ್ನು ಆಚರಿಸುವ ಸಂಪ್ರದಾಯವನ್ನು ಆರಂಭಿಸಿದ್ದು,  ಒಬಾಮಾ, ಮುಂಬರುವ ಅಧ್ಯಕ್ಷರೂ ಈ ಸಂಪ್ರದಾಯವನ್ನು ಮುಂದುವರೆಸಿಕೊಂಡು ಹೋಗಲಿದ್ದಾರೆಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶ್ವೇತ ಭವನದ ಅಧಿಕೃತ ಫೇಸ್ ಬುಕ್ ಪೇಜ್ ನಲ್ಲಿ ಈ ಬಾರಿಯ ದೀಪಾವಳಿ ಫೋಟೋ ಹಾಗೂ ಒಬಾಮಾರ ಸಂದೇಶವನ್ನು ಪೋಸ್ಟ್ ಮಾಡಲಾಗಿದ್ದು, ಇಲ್ಲಿಯವರೆಗೆ ಒಂದೂವರೆ ಲಕ್ಷಕ್ಕೂ ಅಧಿಕ ಮಂದಿ ಲೈಕ್ ಮಾಡಿರುವುದಲ್ಲದೇ 33 ಸಾವಿರಕ್ಕೂ ಅಧಿಕ ಮಂದಿ ಶೇರ್ ಮಾಡಿದ್ದಾರೆ.

ಪತ್ನಿ ಮಿಶೆಲ್ ಒಬಾಮಾ ಜೊತೆ ಮುಂಬೈನಲ್ಲಿ ದೀಪಾವಳಿ ಆಚರಿಸಿದ್ದನ್ನು ಸ್ಮರಿಸಿಕೊಂಡಿರುವ ಬರಾಕ್ ಒಬಾಮಾ, ಕತ್ತಲೆಯನ್ನು ಹೊಡೆದೋಡಿಸಿ ಬೆಳಕನ್ನು ತರುವ ದೀಪಾವಳಿ ಎಲ್ಲರಿಗೂ ಶುಭವನ್ನುಂಟು ಮಾಡಲಿ ಎಂದು ಹಾರೈಸಿದ್ದಾರೆ.  ಅಮೆರಿಕಾ ಅಧ್ಯಕ್ಷೀಯ ಚುನಾವಣೆ ಅಭ್ಯರ್ಥಿ ಹಿಲರಿ ಕ್ಲಿಂಟನ್ ಸಹ ದೀಪಾವಳಿಯ ಶುಭ ಕೋರಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin