ಸಚಿವರ ಸಮ್ಮುಖದಲ್ಲೇ ಸಮಸ್ಯೆ ಬಗೆಹರಿಸಿ

beluru-3

ಬೇಲೂರು, ಆ.11- ಸಾರ್ವಜನಿಕರ ಕುಂದು ಕೊರತೆಗಳನ್ನು ನಿವಾರಿಸುವ ಉದ್ದೇಶದಿಂದ ಕರೆಯಲಾಗುವ ಜನ ಸಂಪರ್ಕ ಸಭೆಗಳಲ್ಲಿ ಅಧಿಕಾರಿಗಳು ಅರ್ಜಿಗಳನ್ನು ಪಡೆದರೆ ಸಾಲದು ಅದನ್ನು ಸಚಿವರ ಸಮ್ಮುಖದಲ್ಲಿಯೆ ಪರಿಹರಿಸಲು ಮುಂದಾಗಬೇಕು ಎಂದು ಸಕಲೇಶಪುರ ಉಪ ವಿಭಾಗಾಧಿಕಾರಿ ಶಿವಕುಮಾರ್ ಹೇಳಿದರು. ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜುರವರಿಂದ ಆ.16ರಂದು ಬೇಲೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಪಾಲ್ಗೊಳ್ಳಲಿರುವ ಜನ ಸಂಪರ್ಕ ಸಭೆಯ ಅಂಗವಾಗಿ ತಹಸೀಲ್ದಾರ್ ಕಚೇರಿಯಲ್ಲಿ ಕರೆಯಲಾಗಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ತಾಲೂಕಿನ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಜನ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಗೆ ಅಧಿಕಾರಿಗಳು ಸರಿಯಾದ ಮಾಹಿತಿ ನೀಡಲು ಸಿದ್ದರಿರಬೇಕು. ವಿವಿಧ ಇಲಾಖೆಗಳಲ್ಲಿ ಸರ್ಕಾರದಿಂದ ವಿತರಿಸುವಂತಹ ಸವಲತುಗಳನ್ನು ಫಲಾನುಭವಿಗಳಿಗೆ ವಿತರಿಸಲು ಪಟ್ಟಿಗಳನ್ನು ಸಿದ್ದಪಡಿಸಿಕೊಳ್ಳಬೇಕು. ಮಾಹಿತಿ ಫಲಕಗಳನ್ನು ಹಾಕಬೇಕು ಎಂದು ಸೂಚಿಸಿದರು. ಜನ ಸಂಪರ್ಕ ಸಭೆ ನಡೆಯುವ ಕಾರ್ಯಕ್ರಮದ ವೇದಿಕೆಯಲ್ಲಿ ಸರ್ಕಾರದ ಪ್ರೊಟೋಕಾಲ್‍ನ್ನು ಖಡ್ಡಾಯವಾಗಿ ಪಾಲಿಸಬೇಕು.

ಅರ್ಜಿದಾರರಿಂದ ಅರ್ಜಿಗಳನ್ನು ಪಡೆದು ಸರತಿಯಂತೆ ಅರ್ಜಿಗಳನ್ನು ಸಚಿವರಿಗೆ ಕೊಡಲಾಗುವುದು.
ಸರ್ಕಾರವೆ ಜನರ ಬಳಿಗೆ ಬರುತ್ತಿದ್ದು, ಇದರಿಂದ ಜನಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳು ಸನ್ನದ್ದರಾಗಬೇಕು ಜೊತೆಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ಇಲಾಖೆ ಅಧಿಕಾರಿಗಳು ಗಮನ ಹರಿಸುವಂತೆ ಹೇಳಿದರು.ಜನಸಂಪರ್ಕ ಸಭೆಯಲ್ಲಿ ಯವುದಾದರು ಅಡಚಣೆ ಉಂಟಾದರೆ ಅಯಾ ಇಲಾಖೆ ಅಧಿಕಾರಿಗಳೆ ನೇರ ಹೊಣೆಗಾರರಾಗಲಿದ್ದು, ಈಗಾಗಲೆ ಅಹವಾಲುಗಳನ್ನು ನಿಗದಿತ ಸಮಯಕ್ಕೆ ವಿಲೇವಾರಿ ಮಾಡದೆ ಇರುವ ಅಧಿಕಾರಿಗಳು ವಿರುದ್ಧ ಕ್ರಮಕೈಗೊಳ್ಳಿ ಎಂದು ಸೂಚನೆ ನೀಡಿದರು.ತಹಸೀಲ್ದಾರ್ ಮುಂಜುನಾಥ್, ಬೇಲೂರು ಹಳೇಬೀಡು ನಗರಾಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ಜಮಾಲೂದ್ದೀನ್, ಪುರಸಭೆ ಮಾಜಿ ಅಧ್ಯಕ್ಷ ಶಾಂತಕುಮಾರ್, ತಾಪಂ ಇಒ ಮಲ್ಲೇಶಪ್ಪ, ಹಾಗೂ ಅಧಿಕಾರಿಗಳಿದ್ದರು.

► Follow us on –  Facebook / Twitter  / Google+

Sri Raghav

Admin