ಸಫಾಯಿ ಕರ್ಮಚಾರಿ ಸಮಸ್ಯೆಗಳ ನಿವಾರಣೆಗೆ ಆಯೋಗದಿಂದ ಯತ್ನ : ವೆಂಕಟೇಶ್

ramanagarqa-2

ರಾಮನಗರ ಏ. 25 :- ಜಿಲ್ಲೆಯ ಸಫಾಯಿ ಕರ್ಮಚಾರಿಗಳ ಸ್ಥಿತಿಗತಿಗಳನ್ನು ಅರಿತು ಅವರ ಸಮಸ್ಯೆಗಳನ್ನು ನಿವಾರಿಸಲು ಆಯೋಗ ರಾಜ್ಯದ ಜಿಲ್ಲೆಗಳ ಪ್ರವಾಸವನ್ನು ಕೈಗೊಂಡಿದೆ ಎಂದು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ಎಂ.ಆರ್. ವೆಂಕಟೇಶ್ ಅವರು ತಿಳಿಸಿದರು. ಅವರು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏ. 25ರ ಮಂಗಳವಾರ ಹಮ್ಮಿಕೊಳ್ಳಲಾಗಿದ ಪ್ರಗತಿ ಪರಿಶೀಲನಾ ಸಭೈಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರವಾಸದ ಸಂದರ್ಭಗಳಲ್ಲಿ ಪೌರಕಾರ್ಮಿಕರ ಜ್ವಲಂತ ಸಮಸ್ಯೆಗಳನ್ನು ಕಂಡುಬಂದರೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನಗಳನ್ನು ನೀಡಿ ಅವುಗಳನ್ನು ಬಗೆಹರಿಸುವ ಯತ್ನ ಮಾಡಲಾಗುತ್ತಿದೆ, ಜಿಲ್ಲೆಯ ಎಲ್ಲಾ ನಗರಸಭೈ ವ್ಯಾಪ್ತಿಯಲ್ಲಿ ಪೌರಕಾರ್ಮಿಕರಿಗೆ ಸರ್ಕಾರದ ವತಿಯಿಂದ ನೀಡಲಾಗುತ್ತಿರುವ ಸೌಲಭ್ಯಗಳು, ಪೌರಕಾರ್ಮಿಕರ ಸಮಸ್ಯೆಗಳನ್ನು ಪೌರಕಾರ್ಮಿಕರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಅವರಿಂದಲೇ ತಿಳಿದುಕೊಂಡ ಆಯೋಗದ ಅಧ್ಯಕ್ಷರು ಜಿಲ್ಲೆಯ ಎಲ್ಲಾ ನಗರಸಭೈಗಳ ಆಯುಕ್ತರಿಗೆ ಸಮಸ್ಯೆಗಳನ್ನು ಬಗೆಹರಿಸುವಂತೆ ನಿರ್ದೇಶನ ನೀಡಿದರು.

ನಂತರ ಜಿಲ್ಲಾ ಪಂಚಾಯತ್‍ನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪೌರ ಕಾರ್ಮಿಕರಿಗೆ ಸರ್ಕಾರದ ಸವಲತ್ತುಗಳು, ವೇತನ, ಭತ್ಯೆ ಇತ್ಯಾದಿಗಳನ್ನು ಅವಲೋಕಿಸಲಾಗಿದೆ ಅಲ್ಲದೇ ಅವರು ವಾಸ ಮಾಡುವ ಕಾಲೋನಿಗಳಿಗೆ ಭೇಟಿ ನೀಡಿ ಅವರ ಸ್ಥಿತಿಗತಿಗಳನ್ನು ವೀಕ್ಷಿಸಲಾಗಿದೆ. ರಾಜ್ಯದ ಹಲವು ಜಿಲ್ಲೆಗಳಿಗೆ ಈ ರೀತಿ ಭೇಟಿ  ನೀಡಿದ್ದು, ಉಳಿದ ಜಿಲ್ಲೆಗೆ ಹೋಲಿಕೆ ಮಾಡಿದ್ದಲ್ಲಿ ರಾಮನಗರದ ಸ್ಥಿತಿ ಉತ್ತಮವಾಗಿದೆ ಎಂದು ಅವರು ಹೇಳಿದರು. ರಾಜ್ಯ ಸರ್ಕಾರ ಪೌರಕಾರ್ಮಿಕರಿಗೆ ಪ್ರಕಟಿಸಿರುವ ನೂತನ ವೇತನದ ಅನುಷ್ಠಾನದಲ್ಲಿ ಸ್ವಲ್ಪ ಮಟ್ಟಿನ ಅಡಚಣೆಯಾಗಿದ್ದು ಅದನ್ನು ಸರಿಪಡಿಸಲಾಗುತ್ತಿದೆ, ರಾಜ್ಯದ ಎ ಕೇಂದ್ರಗಳಲ್ಲಿ ಸೇವೆ ಸಲ್ಲಿಸುವ ಪೌರಕಾರ್ಮಿಕರಿಗೆ 14,040 ರೂ. ಗಳು, ಬಿ ಕೇಂದ್ರಗಳಲ್ಲಿ ಸೇವೆ ಸಲ್ಲಿಸುವ ಪೌರಕಾರ್ಮಿಕರಿಗೆ 13,040 ರೂ.ಗಳು ಹಾಗೂ ಸಿ ಕೇಂದ್ರಗಳಲ್ಲಿ ಸೇವೆ ಸಲ್ಲಿಸುವ ಪೌರಕಾರ್ಮಿಕರಿಗೆ 12,640 ರೂ.ಗಳ ವೇತನ ನೀಡಲು ಮಂಜೂರು ಮಾಡಲಾಗಿದೆ ಅದರೊಂದಿಗೆ ಉಪಹಾರ ಯೋಜನೆಯು ಅನುಷ್ಠಾನಗೊಂಡಿದೆ ಎಂದು ಅವರು ಹೇಳಿದರು.

ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 12 ಮಂದಿ ಪೌರಕಾರ್ಮಿಕರಿಗೆ ಕಾರ್ಮಿಕ ಇಲಾಖೆಯ ನಿರ್ದೇಶನದಂತೆ ವೇತನ ಪಾವತಿಸಬೇಕು, ಆದರೆ ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಇದು ಪಾಲನೆಯಾಗುತ್ತಿಲ್ಲ, ಇದನ್ನು ಗಮನಿಸಿರುವ ಆಯೋಗವು ಆಸ್ಪತ್ರೆಯ ಮುಖ್ಯಸ್ಥರು ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದರು. ಅದೇ ರೀತಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ರಾಮನಗರ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಹಾಗೂ ನೈರ್ಮಲ್ಯ ಕಾರ್ಯ ನಿರ್ವಹಿಸುವ ಸಂಸ್ಥೆಗಳಿಂದ ಟೆಂಡರ್ ಕರೆದು ಪೌರಕಾರ್ಮಿಕರ ಕೆಲಸವನ್ನು ನಿರ್ವಹಿಸಲಾಗುತ್ತಿದೆ. ಆದರೆ ಕಾರ್ಮಿಕರ ಇಲಾಖೆಯ ನಿರ್ದೇಶನದಂತೆ ಅಲ್ಲಿಯೂ ವೇತನ ಪಾವತಿಯಾಗುತ್ತಿಲ್ಲ ಈ ಹಿನ್ನೆಲೆಯಲ್ಲಿ ಅಲ್ಲಿನ ಮುಖ್ಯಸ್ಥರು ಹಾಗೂ ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪೌರ ಕಾರ್ಮಿಕರು ತಮ್ಮ ಕೆಲಸಗಳನ್ನು ನಿರ್ವಹಿಸಲು ಅವರಿಗೆ ಅಗತ್ಯ ಪರಿಕರಿಗಳಾದ ಶೂ, ಗ್ಲೌಸ್, ಮಾಸ್ಕ್ ಸೇರಿದಂತೆ ಅಗತ್ಯ 19 ಪರಿಕರಗಳನ್ನು ಒದಗಿಸಬೇಕು, ಇಲ್ಲದಿದ್ದರೆ ಅವರಿಗೆ ಸಾಂಕ್ರಾಮಿಕ ರೋಗಗಳು ಬಲು ಬೇಗ ಹರಡುತ್ತವೆ. ಆ ಪರಿಕರಗಳನ್ನು ಉಪಯೋಗಿಸುವ ಬಗ್ಗೆಯೂ ಅರಿವು ನೀಡಲು ಜಾಗೃತಿ ಶಿಬಿರಗಳನ್ನು ಹಮ್ಮಿಕೊಳ್ಳಬೇಕು. ಇವುಗಳ ಆಯೋಜನೆಗೆ ಜಿಲ್ಲಾಧಿಕಾರಿಯವರಿಗೆ ಆಯೋಗದಿಂದ ಹಣ ಬಿಡುಗಡೆ ಮಾಡಲಾಗುವುದು, ಜಿಲ್ಲಾಧಿಕಾರಿಗಳು ಅವರ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಅವರು ಹೇಳಿದರು.

ಅರ್ಕಾವತಿ ನದಿಗೆ ಮಾನವ ಜನ್ಯ ತ್ಯಾಜ್ಯ ಹರಿಸುವುದು ಗಂಭೀರ ವಿಚಾರವಾಗಿದ್ದು, ಈ ಬಗ್ಗೆ ಪ್ರಕರಣ ದಾಖಲಿಸುವ ಬಗ್ಗೆ ಎಚ್ಚರಿಸಿದ ಅವರು ನದಿಯಲ್ಲಿ ಕೊಳಚೆ ಹರಿಸುವುದು ಸಲ್ಲದು, ಈ ಬಗ್ಗೆ ಮುಂದಿನ ಒಂದು ತಿಂಗಳಲ್ಲಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದ ಅವರು, ವಿದೇಶಗಳಲ್ಲಿ ನಿರ್ವಹಿಸುವ ಸ್ವಚ್ಛತಾ ಕಾರ್ಯಗಳನ್ನು ವೀಕ್ಷಿಸಲು ರಾಜ್ಯದಲ್ಲಿ ಒಂದು ಸಾವಿರ ಪೌರಕಾರ್ಮಿಕರನ್ನು ವಿದೇಶಕ್ಕೆ ಕಳುಹಿಸಿಕೊಡಲು ಪಟ್ಟಿಯೊಂದನ್ನು ಸಿದ್ದಪಡಿಸಲಾಗಿದೆ, ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ 7.50 ಲಕ್ಷ ರೂ.ಗಳನ್ನು ಸಂದಾಯ ಮಾಡಲಾಗುತ್ತಿದೆ ಅದನ್ನು ನಿವೃತ್ತಿ ಹೊಂದಿದವರಿಗೂ ವಿಸ್ತರಿಸುವಂತೆ ಮಾನ್ಯ ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗಿದೆ, ಸಫಾಯಿ ಕರ್ಮಚಾರಿ ಆಯೋಗದಲ್ಲಿ ಸಫಾಯಿ ಕರ್ಮಚಾರಿಗಳ ನಿಗಮವನ್ನು ಸ್ಥಾಪಿಸಲಾಗಿದ್ದು, ನಿಗಮದಲ್ಲಿ ಕೌಶಲ್ಯಾಭಿವೃದ್ದಿ ತರಬೇತಿಗಳನ್ನು ಹಾಗು ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಯೋಜನೆಗಳನ್ನು ಒದಗಿಸಲಾಗುವುದು ಎಂದು ಅವರು ಹೇಳಿದರು.

ಸಫಾಯಿ ಕರ್ಮಚಾರಿ ಆಯೋಗದ ಸದಸ್ಯರಾದ ಗೋಕುಲ್ ನಾರಾಯಣಸ್ವಾಮಿ, ಜಿಲ್ಲಾಧಿಕಾರಿ ಡಾ. ಬಿ.ಆರ್. ಮಮತಾ, ಜಿಲ್ಲಾ ಪಂಚಾಯತ್‍ನ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಸಿ.ಪಿ ಶೈಲಜಾ, ಉಪ ವಿಭಾಗಾಧಿಕಾರಿ ಡಾ. ರಾಜೇಂದ್ರ ಪ್ರಸಾದ್, ನಗರಸಭೈ ಅಧ್ಯಕ್ಷರಾದ ಪಿ. ರವಿಕುಮಾರ್, ಸಫಾಯಿ ಕರ್ಮಚಾರಿ ಆಯೋಗದ ಉಪ ನಿರ್ದೇಶಕ ಮಂಜುನಾಥ್ ಅವರು ವೇದಿಕೆಯಲ್ಲಿದ್ದರು.  ನಗರಸಭೈ ಆಯುಕ್ತ ಮಾಯಣ್ಣ ಸ್ವಾಗತಿಸಿದರು. ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ್, ಜಿಲ್ಲೆಯ ನಗರಸಭೈ ಆಯುಕ್ತರು, ಪೌರಕಾರ್ಮಿಕರು, ಗುತ್ತಿಗೆದಾರರು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಅಂಬೇಡ್ಕರ್ ಕಾಲೋನಿಗೆ ಭೇಟಿ :

ಇದಕ್ಕೂ ಮುನ್ನ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ಎಂ.ಆರ್. ವೆಂಕಟೇಶ್, ಆಯೋಗದ ಸದಸ್ಯರಾದ ಗೋಕುಲ್ ನಾರಾಯಣಸ್ವಾಮಿ, ನಗರಸಭೈ ಅಧ್ಯಕ್ಷರಾದ ಪಿ. ರವಿಕುಮಾರ್, ನಗರಸಭೈ ಆಯುಕ್ತ ಮಾಯಣ್ಣಗೌಡ, ಜಿಲ್ಲಾ ನಗರಾಭಿವೃದ್ಧಿ ಯೋಜನಾ ಕೋಶದ ಯೋಜನಾ ನಿರ್ದೇಶಕ ಮಂಜುನಾಥ್ ಸೇರಿದಂತೆ ಇತರೆ ಅಧಿಕಾರಿಗಳು, ಪೌರಕಾರ್ಮಿಕರು ಹೆಚ್ಚಾಗಿ ವಾಸ ಮಾಡುವ ನಗರದ ಅಂಬೇಡ್ಕರ್ ಕಾಲೋನಿಗೆ ಭೈೀಟಿ ನೀಡಿ ಅಹವಾಲು ಸ್ವೀಕರಿಸಿದರು.

ಈ ವೇಳೆ ಪೌರಕಾರ್ಮಿಕರು, ಶೌಚಾಲಯಗಳಿಲ್ಲವೆಂಬ ಅಂಶವನ್ನು ಆಯೋಗದ ಅಧ್ಯಕ್ಷರ ಗಮನಕ್ಕೆ ತಂದರು, ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಅಧ್ಯಕ್ಷರು ಕಾಲೋನಿಯಲ್ಲಿ ಸಾಮೂಹಿಕ ಶೌಚಾಲಯಗಳನ್ನು ನಿರ್ಮಿಸಿಕೊಡುವಂತೆ ನಗರಸಭೈ ಆಯುಕ್ತರಿಗೆ ಸೂಚನೆ ನೀಡಿದರು. ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ವಿವಿಧ ವಸತಿ ಯೋಜನೆಗಳಡಿ ಮನೆಗಳನ್ನು ಒದಗಿಸಿಕೊಡಲು ಸೂಚಿಸಿದ ಅವರು, ನಗರದ ವಿವಿಧ ಸ್ಥಳಗಳಿಗೆ ಭೈೀಟಿ ನೀಡಿ ಪೌರಕಾರ್ಮಿಕರು ತಮ್ಮ ಕಾರ್ಯದಲ್ಲಿ ಸುರಕ್ಷತಾ ಪರಿಕರಗಳನ್ನು ಬಳಸುತ್ತಿದ್ದಾರೆಯೇ ಎಂಬುದನ್ನು ವೀಕ್ಷಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin