ಸರಗಳ್ಳನ ಸೆರೆ : 6 ಲಕ್ಷ ರೂ. ಮೌಲ್ಯದ ಮಾಲು ವಶ

chain--sntcher
ಬೆಂಗಳೂರು, ಅ.22-ಪಲ್ಸರ್ ಬೈಕ್‍ನಲ್ಲಿ ಸುತ್ತಾಡುತ್ತಾ ಮಹಿಳೆಯರ ಸರ ಎಗರಿಸುತ್ತಿದ್ದ ಸರಗಳ್ಳನೊಬ್ಬನನ್ನು ತಲಘಟ್ಟಪುರ ಪೊಲೀಸರು ಬಂಧಿಸಿ ಆರು ಲಕ್ಷ ರೂ. ಬೆಲೆಯ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಕೊತ್ತನೂರು ಮುಖ್ಯರಸ್ತೆಯ ರೋಷನ್‍ಬೇಗ್(23) ಬಂಧಿತ ಸರಗಳ್ಳನಾಗಿದ್ದು , ಈತನಿಂದ 174 ಗ್ರಾಂ ತೂಕದ ಚಿನ್ನದ ಆಭರಣಗಳು ಹಾಗೂ ಒಂದು ಪಲ್ಸರ್ ಬೈಕ್‍ನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯ ಬಂಧನದಿಂದ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು ಪ್ರಕರಣ, ತಲಘಟ್ಟಪುರ ಠಾಣೆಯಲ್ಲಿ ದಾಖಲಾಗಿದ್ದ ಒಂದು ಪ್ರಕರಣ, ಜೆಪಿನಗರ ಠಾಣೆಯಲ್ಲಿ ದಾಖಲಾಗಿದ್ದ ಒಂದು ವಾಹನ ಕಳವು ಪ್ರಕರಣ ಸೇರಿ ಒಟ್ಟು ಆರು ಪ್ರಕರಣಗಳು ಪತ್ತೆಯಾದಂತಾಗಿದೆ.

ಈತ ತನ್ನ ಸಹಚರ ಇಮ್ರಾನ್ ಎಂಬಾತನೊಂದಿಗೆ ಸೇರಿಕೊಂಡು ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂರು ಸರ ಅಪಹರಣ ಮತ್ತು ತಲಘಟ್ಟಪುರ ವ್ಯಾಪ್ತಿಯ ಮನೆಯೊಂದರಲ್ಲಿ ಕಳ್ಳತನ ಮಾಡಿರುವುದಾಗಿ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ. ಬೆಂಗಳೂರು ದಕ್ಷಿಣ ವಿಭಾಗದ ಉಪಪೊಲೀಸ್ ಕಮೀಷನರ್ ಡಾ.ಶರಣಪ್ಪ , ಮಾರ್ಗದರ್ಶನದಲ್ಲಿ ಬನಶಂಕರಿ ಉಪವಿಭಾಗದ ಸಹಾಯಕ ಪೊಲೀಸ್ ಕಮೀಷನರ್ ಎಚ್.ಮಂಜುನಾಥಚೌದರಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದರು.

 

► Follow us on –  Facebook / Twitter  / Google+

Sri Raghav

Admin