ಸಲ್ಮಾನ್‍ಖಾನ್‍ ಗೆ ಎರಡು ನೋಟಿಸ್ ನೀಡಿದ ಸುಪ್ರೀಂ ಕೋರ್ಟ್

Salman-Khan-000002

ನವದೆಹಲಿ,ನ.11-ಕೃಷ್ಣಮೃಗ ಭೇಟಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಲಿವುಡ್ ಖ್ಯಾತ ನಟ ಸಲ್ಮಾನ್‍ಖಾನ್‍ಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿಗೊಳಿಸಿದೆ.  ಈ ಪ್ರಕರಣದಲ್ಲಿ ಸಲ್ಮಾನ್ ಖಾನ್ ಖುಲಾಸೆಗೊಂಡಿರುವುದನ್ನು ಪ್ರಶ್ನಿಸಿ ರಾಜಸ್ಥಾನ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಪುರಸ್ಕರಿಸಿರುವ ಸುಪ್ರೀಂಕೋರ್ಟ್ ಇಂದು ಬಾಲಿವುಡ್ ನಟನಿಗೆ ನೋಟಿಸ್ ನೀಡಿದೆ. ಇದೇ ವೇಳೆ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಖುಲಾಸೆಗೊಂಡ ಕೇಸ್‍ನಲ್ಲೂ ಸುಪ್ರೀಂಕೋರ್ಟ್ ಸಲ್ಮಾನ್‍ಗೆ ನೋಟಿಸ್ ರವಾನಿಸಿದೆ. ಈ ಪ್ರಕರಣದಲ್ಲಿ ಖಾನ್ ಆರೋಪ ಮುಕ್ತಗೊಂಡಿರುವುದನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಹಿನ್ನೆಲೆಯಲ್ಲಿ ನೋಟಿಸ್ ನೀಡಿದೆ.  ಇದರೊಂದಿಗೆ ಈ ಎರಡೂ ಪ್ರಕರಣಗಳಲ್ಲಿ ಸಲ್ಮಾನ್‍ಖಾನ್‍ಗೆ ಮತ್ತೆ ಕಾನೂನು ಕಂಟಕ ಎದುರಾಗಿದೆ.

► Follow us on –  Facebook / Twitter  / Google+

Sri Raghav

Admin