ಸಾಲಬಾಧೆಗೆ ಆತ್ಮಹತ್ಯೆ

Spread the love

farmers suicide

ಮಂಡ್ಯ,ಸೆ.23-ಸಾಲಬಾಧೆಯಿಂದ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲ್ಲೂಕಿನ ಬಿದರಹೊಸಹಳ್ಳಿಯಲ್ಲಿ ನಡೆದಿದೆ. ಸಿದ್ದೇಗೌಡ(50) ಮೃತಪಟ್ಟ ರೈತ. ಗ್ರಾಮದಲ್ಲಿ 30 ಗುಂಟೆ ಜಮೀನು ಹೊಂದಿದ್ದ ಈತ ಬೆಳೆ ಬೆಳೆಯಲು ವಿವಿಧ ಬ್ಯಾಂಕ್‍ಗಳಲ್ಲಿ ಮೂರು ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ನಷ್ಟ ಸಂಭವಿಸಿದ ಹಿನ್ನೆಲೆಯಲ್ಲಿ ಜಮೀನಿಗೆ ಹೋಗಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ.

 

► Follow us on –  Facebook / Twitter  / Google+

 

Facebook Comments

Sri Raghav

Admin