ಸಾಲಭಾದೆ ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆ

farmers

ಮಂಡ್ಯ,ನ.21- ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ ಬೇಲೂರು ಗ್ರಾಮದ ನಿವಾಸಿ ಬೋರೇಗೌಡ ಆತ್ಮಹತ್ಯೆ ಮಾಡಿಕೊಂಡಿರುವ ರೈತ. ತಮಗಿದ್ದ ಜಮೀನಿನಲ್ಲಿ ಕೃಷಿಯನ್ನು ನೆಚ್ಚಿಕೊಂಡು ಜೀವನ ಸಾಗಿಸುವಲ್ಲಿ ಬೋರೇಗೌಡ ಸಾಲ ಮಾಡಿ ಬೆಳೆ ಬೆಳೆ ನಾಟಿ ಮಾಡಿದ್ದರು. ಆದರೆ ಮಳೆ ಬಾರದ ಕಾರಣ ಬೆಳೆ ನಷ್ಟವುಂಟಾಗಿ ತೀವ್ರ ಆತಂಕಕ್ಕೆ ಒಳಗಾಗಿದ್ದರು. ಬೆಳೆದ ಬೆಳೆ ಕೈಗೆ ಬಾರದ ಕಾರಣ ಸಾಲ ತೀರಿಸಿದರೂ ಹೇಗೆ ಎಂದು ತಮ್ಮ ಜಮೀನಿನ ಪಕ್ಕದಲ್ಲಿರುವ ಕೆರೆ ಸಮೀಪ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಗಮನಿಸಿದ ಅಕ್ಕಪಕ್ಕದವರು ಆಸ್ಪತ್ರೆಗೆ ಸಾಗಿಸಲು ಮುಂದಾದರೂ ಮಾರ್ಗ ಮಧ್ಯೆ ಸಾವನ್ನಪ್ಪಿದ್ದರು.

 

► Follow us on –  Facebook / Twitter  / Google+

Sri Raghav

Admin