ಸಿಂಗಪುರ್ ಮಾಜಿ ಅಧ್ಯಕ್ಷ ಎಸ್.ಆರ್.ನಾಥನ್ ನಿಧನ

Nathana

ಸಿಂಗಪುರ್, ಆ.23-ಭಾರತೀಯ ಮೂಲದ ಸಿಂಗಪುರ್ ಮಾಜಿ ಅಧ್ಯಕ್ಷ ಎಸ್.ಆರ್.ನಾಥನ್ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಸಕಲ ಸರ್ಕಾರಿ ಗೌರವಗಳೊಂದಿಗೆ ಶುಕ್ರವಾರ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಪ್ರಧಾನಮಂತ್ರಿಯವರ ಕಾರ್ಯಾಲಯ ತಿಳಿಸಿದೆ.  ಮಾಜಿ ಅಧ್ಯಕ್ಷರ ನಿಧನದ ಗೌರವಾರ್ಥ ಎಲ್ಲ ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜ ಅರ್ಧಮಟ್ಟಕ್ಕೆ ಇಳಿದಿದೆ.  ನ್ಯಾಷನಲ್ ಯೂನಿವರ್ಸಿಟಿ ಆಫ್ ಸಿಂಗಪುರ್ನ ವಿಶ್ವವಿದ್ಯಾಲಯ ಸಂಸ್ಕೃತಿ ಕೇಂದ್ರದಲ್ಲಿ ಶುಕ್ರವಾರ ಸಂಜೆ 4 ಗಂಟೆಗೆ ಅಂತಿಮ ಸಂಸ್ಕಾರ ನಡೆಯಲಿದೆ. ಅಧ್ಯಕ್ಷ ಟೋನಿ ಟಾನ್, ಸಂಪುಟ ಸಚಿವರು ಮತ್ತು ಸಂಸದರು ಹಾಗೂ ಸರ್ಕಾರಿ ಅಧಿಕಾರಿಗಳು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.

► Follow us on –  Facebook / Twitter  / Google+

Sri Raghav

Admin