ಸಿಎಂ ಸಿದ್ದರಾಮಯ್ಯನವರನ್ನು ಅವಾಚ್ಯವಾಗಿ ನಿಂದಿಸಿದವನು ಈಗ ಪೊಲೀಸರ ಅತಿಥಿ

Siddaramaiaha--vd

ತುಮಕೂರು, ಮಾ.26: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿಯಾಗಿ ಸೆಲ್ಫಿ ವೀಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದ್ದ ಆರೋಪಿಯನ್ನು ತುಮಕೂರು ಪೋಲಿಸರು ಬಂಧಿಸಿದ್ದಾರೆ. ತುಮಕೂರು ನಗರದ ಭೀಮಸಂದ್ರದ ನಾಗರಾಜ್ ಬಂಧಿತ ಆರೋಪಿ.   ಕೆಲವು ದಿನಗಳ ಹಿಂದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಾಚ್ಯವಾಗಿ ನಿಂದಿಸಿ, ಸೆಲ್ಫಿ ವೀಡಿಯೊ ಮಾಡಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ತೇಲಿಬಿಟ್ಟಿದ್ದ. ಈ ಬಗ್ಗೆ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಈ ಘಟನೆ ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದರಿಂದ ಪ್ರಕರಣವನ್ನು ತುಮಕೂರು ನಗರ ಠಾಣೆಗೆ ವರ್ಗಾಯಿಸಲಾಗಿತ್ತು. ಅವಾಚ್ಯ ಶಬ್ದಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ನಿಂದಿಸಿದ ಈ ವಿಡಿಯೋ ವೈರಲ್ ಆಗಿತ್ತು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin