ಸಿಎಂ ಸಿದ್ದರಾಮಯ್ಯನವರಿಗೆ ಜ್ವರ, ಗಂಟಲು ನೋವು
ಬೆಂಗಳೂರು, ಫೆ.2– ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಜ್ವರ ಮತ್ತು ಗಂಟಲು ನೋವಿನಿಂದ ಬಳಲುತ್ತಿದ್ದು. ತಮ್ಮ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ವೈದ್ಯರ ಸಲಹೆಯಂತೆ ವಿಶ್ರಾಂತಿಯ ಮೊರೆ ಹೋಗಿದ್ದಾರೆ. ಇಂದು ತಮ್ಮ ಗೃಹ ಕಚೇರಿಗೆ ಆಗಮಿಸಿದ ಆಪ್ತ ಮರೀಗೌಡ ಸೇರಿದಂತೆ ಯಾರನ್ನೂ ಮುಖ್ಯಮಂತ್ರಿಗಳು ಭೇಟಿ ಮಾಡಿಲ್ಲ. ಚಿಕಿತ್ಸೆ ಪಡೆದು ಸಂಜೆ ವೇಳೆಗೆ ವಿಶ್ರಾಂತಿ ಪಡೆಯಲಿದ್ದಾರೆ. ಕಳೆದ ಮೂರು ದಿನಗಳ ಹಿಂದೆಯೇ ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳು ಮತ್ತು ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಜ್ವರ ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ಚಿಕಿತ್ಸ ಪಡೆದುಕೊಂಡು ಮತ್ತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಿನ್ನೆ ಮೈಸೂರಿಗೆ ಹೋಗಿ ಬಂದ ಮೇಲೆ ಜ್ವರದ ಬಾಧೆ ಹಾಗೂ ಗಂಟಲು ನೋವು ತೀವ್ರವಾಗಿದೆ.
ವೈದ್ಯರು ಚಿಕಿತ್ಸೆ ನೀಡಿ ವಿಶ್ರಾಂತಿ ಪಡೆಯುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >