ಸಿಡಿಲಿಗೆ ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತ ಸಾವು 

Spread the love

Kolar
ಕೋಲಾರ, ಮೇ 19- ಸಿಡಿಲು ಬಡಿದು ರೈತನೊಬ್ಬ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಕನಿಶೆಟ್ಟಿಹಳ್ಳಿಯಲ್ಲಿ ನಡೆದಿದೆ.ನಿನ್ನೆ ಸಂಜೆ ಗುಡುಗು-ಸಿಡಿಲಿನಿಂದ ಕೂಡಿದ ಭಾರೀ ಮಳೆ ಸುರಿದ ಸಂದರ್ಭ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೆಂಕಟಾಚಲಪತಿ ಎಂಬ (45) ರೈತ ಮೃತಪಟ್ಟಿದ್ದಾನೆ.ಇಂದು ಬೆಳಗ್ಗೆ ಈ ಪ್ರಕರಣ ಬೆಳಕಿಗೆ ಬಂದಿದ್ದು, ಮೈಯೆಲ್ಲಾ ಸುಟ್ಟ ಗಾಯಗಳಾಗಿರುವುದರಿಂದ ಇವರು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಚಿಂತಾಮಣಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin