ಸಿಡಿಲು ಬಡಿದು ಮಹಿಳೆ ಸಾವು, ಮತ್ತೋರ್ವ ಮಹಿಳೆಗೆ ಗಾಯ

Women-01
ತುಮಕೂರು,ಏ.1- ರಾತ್ರಿ ಸುರಿದ ಸಿಡಿಲು ಸಹಿತ ಮಳೆಗೆ ಒಬ್ಬ ಮಹಿಳೆ ಸಾವನ್ನಪ್ಪಿದರೆ, ಮತ್ತೋರ್ವ ಮಹಿಳೆ ಗಾಯಗೊಂಡಿರುವ ಘಟನೆ ಕೋಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊರಟಗೆರೆ ತಾಲ್ಲೂಕಿನ ಬುತನಹಳ್ಳಿ ಗ್ರಾಮದ ನಿವಾಸಿ ಹನುಮಕ್ಕ(60) ಸಾವನ್ನಪ್ಪಿರುವ ಮಹಿಳೆ. ರಾತ್ರಿ ಜಿಲ್ಲೆಯಲ್ಲಿ ಭಾರೀ ಸಿಡಿಲು ಸಹಿತ ಮಳೆ ಸುರಿದಿದ್ದು , ಈ ವೇಳೆ ಇಬ್ಬರು ಮಹಿಳೆಯರಿಗೆ ಸಿಡಿಲು ಬಡಿದಿದೆ. ಹನುಮಕ್ಕ ಸ್ಥಳದಲ್ಲೇ ಸಾವನ್ನಪ್ಪಿದರೆ, ನರಸಮ್ಮ(55) ಅವರ ಕೈ ಮತ್ತು ಕಾಲು ಸ್ವಾಧೀನ ಕಳೆದುಕೊಂಡಿವೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Sri Raghav

Admin