ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವು
ಕಲ್ಬುರ್ಗಿ, ಆ.31- ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಅಳಂದ ತಾಲ್ಲೂಕಿನ ಗುಂಜ್ಬಬಲಾದ್ ಗ್ರಾಮದಲ್ಲಿ ನಡೆದಿದೆ.ಮೃತನನ್ನು ರವೀಂದ್ರ (40) ಎಂದು ತಿಳಿದು ಬಂದಿದ್ದು, ಈತನ ಜತೆಗಿದ್ದ ಜಗದೇವಪಋ್ಪ ಎಂಬುವರಿಗೆ ಗಂಭೀರ ಸುಟ್ಟ ಗಾಯಗಳಾಗಿದ್ದು, ಆತನನ್ನು ಕಲ್ಬುರ್ಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ.ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಜೋರಾಗಿ ಮಳೆ ಬರಂದು ಈ ವೇಳೆ ಹತ್ತಿರದಲ್ಲೇ ಇದ್ದ ಮರದ ಬಳಿ ಆಶ್ರಯ ಪಡೆಯಲು ಹೋದಾಗ ಸಿಡಿಲು ಬಡಿದಿದೆ ಎಂದು ಹೇಳಲಾಗುತ್ತಿದೆ.ನರೋಡಾ ಪೊಲೀಸ್ ಠಾಣೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
► Follow us on – Facebook / Twitter / Google+