ಸಿಬಿಐ ವಿಶೇಷ ನ್ಯಾಯಾಲಯದಿಂದ ಜಯಚಂದ್ರಗೆ ಜಾಮೀನು
ಬೆಂಗಳೂರು,ಡಿ.15– ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಬಂಧಿಯಾಗಿದ್ದ ಸರ್ಕಾರಿ ಅಧಿಕಾರಿಗಳಾದ ಜಯಚಂದ್ರ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇಂದು ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಕೆಲವು ಷರತ್ತುಗಳನ್ನು ವಿಧೀಸಿ ಮಧ್ಯಾಹ್ನ ಜಾಮೀನು ಮಂಜೂರು ಮಾಡಿದೆ. ಆದರೆ ರಾಜ್ಯದ ಭ್ರಷ್ಟಾಚಾರ ನಿಗ್ರಹದಳ ಹಾಗೂ ಕೇಂದ್ರ ಜಾರಿ ನಿರ್ದೇಶನಾಲಯ ಕೂಡ ಎಫ್ಐಆರ್ ದಾಖಲಿಸಿರುವುದರಿಂದ ಜಯಚಂದ್ರ ಅವರನ್ನು ಯಾವುದೇ ಸಂದರ್ಭದಲ್ಲಿ ಬಂಧಿಸುವ ಸಾಧ್ಯತೆ ಇದೆ.