ಸುಪ್ರೀಂ ಜ.31ರಂದು ಜಲ್ಲಿಕಟ್ಟುಗೆ ಸಂಬಂಧಪಟ್ಟ ಎಲ್ಲ ವಿಷಯಗಳ ವಿಚಾರಣೆ
ನವದೆಹಲಿ, ಜ.27-ತಮಿಳುನಾಡಿನ ಪ್ರಾಚೀನ ಜಲ್ಲಿಕಟ್ಟು ಕ್ರೀಡೆಗೆ ಸಂಬಂಧಪಟ್ಟ ಎಲ್ಲಾ ವಿಷಯಗಳ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ. ಇದೇ ವೇಳೆ ಜಲ್ಲಿಕಟ್ಟು ಆಚರಣೆಗೆ ಅವಕಾಶ ನೀಡುವ ಜ.6, 2016ರ ಅಧಿಸೂಚನೆ ಹಿಂಪಡೆಯಲು ಕೋರಿ ಕೇಂದ್ರ ಸರ್ಕಾರ ಇಂದು ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದೆ. ಈ ಆಚರಣೆಗೆ ಸಂಬಂಧಪಟ್ಟ ಎಲ್ಲ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಿರುವ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠವು ಮುಂದಿನ ಮಂಗಳವಾರ ಈ ಎಲ್ಲ ವಿಷಯಗಳ ಬಗ್ಗೆ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಜಲ್ಲಿಕಟ್ಟು ಆಚರಣೆಗೆ ಅವಕಾಶ ನೀಡುವ 2016ರ ಅಧಿಸೂಚನೆಯನ್ನು ಹಿಂದಕ್ಕೆ ಪಡೆಯಲು ಕೋರಿ ಕೇಂದ್ರ ಸರ್ಕಾರ ನ್ಯಾಯಪೀಠದ ಮುಂದೆ ಮನವಿ ಸಲ್ಲಿಸಿದೆ ಎಂದು ಅಟಾರ್ನಿ ಜನರಲ್ ಮುಕುಲ್ ರೋಹಟಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments