ಸ್ಪೋಟಕ ತಯಾರಿಕಾ ಘಟಕದಲ್ಲಿ ಭಾರೀ ಸ್ಪೋಟ : 20 ಕಾರ್ಮಿಕರ ಸಾವು

Spread the love

Blast-10kille-d

ತಿರುಚ್ಚಿ, ಡಿ.1– ಸ್ಪೋಟಕ ತಯಾರಿಕಾ ಘಟಕದಲ್ಲಿ ಸಂಭವಿಸಿದ ಭಾರೀ ಸ್ಪೋಟದಿಂದ 20ಕ್ಕೂ ಹೆಚ್ಚು ಕಾರ್ಮಿಕರು ಸಾವಿಗೀಡಾಗಿ, ಅನೇಕರು ಗಾಯಗೊಂಡಿ ರುವ ಘಟನೆ ತಮಿಳುನಾಡಿನ ತಿರುಚ್ಚಿ ಜಿಲ್ಲೆಯ ತುರಯೂರ್‍ನಲ್ಲಿ ಇಂದು ಮುಂಜಾನೆ ನಡೆದಿದೆ.  ಈ ಘಟಕದಲ್ಲಿ 60ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಭಾರೀ ಸ್ಫೋಟ ಸಂಭವಿಸಿತು. ದುರ್ಘಟನೆಯಲ್ಲಿ ಕನಿಷ್ಠ 20 ಕಾರ್ಮಿಕರು ಸಾವಿಗೀಡಾಗಿದ್ದಾರೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಫೋಟದ ಸಂದರ್ಭದಲ್ಲಿ ಘಟಕದ ಒಳಗೆ ಸಿಲುಕಿದ್ದ 50ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲು 10 ವಾಹನಗಳೊಂದಿಗೆ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಮಾಡಿದರು. ಈ ತಯಾರಿಕಾ ಘಟಕದಲ್ಲಿ ಸ್ಫೋಟಕಗಳು ಮತ್ತು ಮದ್ದುಗುಂಡುಗಳನ್ನು ತಯಾರಿಸಲಾಗುತ್ತಿತ್ತು. ಸ್ಫೋಟಕ್ಕೆ ಕಾರಣಗಳನ್ನು ಪತ್ತೆ ಮಾಡಲಾಗುತ್ತಿದೆ. ತಮಿಳುನಾಡಿನ ವಿಲ್ಲುಪುರ ಜಿಲ್ಲೆಯಲ್ಲಿ ಕಳೆದ ತಿಂಗಳು ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಎಂಟು ಮಂದಿ ಬಲಿಯಾಗಿದ್ದರು.

https://www.youtube.com/watch?v=zlZ7TNHpgNI

ಈ ತಯಾರಿಕಾ ಘಟಕದಲ್ಲಿ ಸ್ಫೋಟಕಗಳು ಮತ್ತು ಮದ್ದುಗುಂಡುಗಳನ್ನು ತಯಾರಿಸಲಾಗುತ್ತಿತ್ತು. ಸ್ಫೋಟಕ್ಕೆ ಕಾರಣಗಳನ್ನು ಪತ್ತೆ ಮಾಡಲಾಗುತ್ತಿದೆ. ತಮಿಳುನಾಡಿನ ವಿಲ್ಲುಪುರ ಜಿಲ್ಲೆಯಲ್ಲಿ ಕಳೆದ ತಿಂಗಳು ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಎಂಟು ಮಂದಿ ಬಲಿಯಾಗಿದ್ದರು.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Sri Raghav

Admin