ಸ್ಮಶಾನದಲ್ಲಿ ಪಾರ್ಟಿ ಮಾಡಿದರು, ನಂತರ ಅಲ್ಲೇ ಮರ್ಡರ್ ಮಾಡಿದರು..!

Murder

ಬೆಂಗಳೂರು, ಡಿ.21- ಸ್ಮಶಾನದಲ್ಲಿ ಪಾರ್ಟಿ ಮಾಡಿದ ವೇಳೆ ನಡೆದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯ ಹೆಸರು, ವಿಳಾಸ ತಿಳಿದುಬಂದಿಲ್ಲ. ಸುಮಾರು 25 ರಿಂದ 30 ವರ್ಷದಂತೆ ಕಾಣುವ ಈ ವ್ಯಕ್ತಿಯು ಜೀನ್ಸ್‍ಪ್ಯಾಂಟ್ ಹಾಗೂ ಟೀ ಶರ್ಟ್ ಧರಿಸಿದ್ದಾನೆ. ನಿನ್ನೆ ರಾತ್ರಿ ಅರಕೆರೆ ಸಮೀಪದ ಸ್ಮಶಾನದಲ್ಲಿ ಸ್ನೇಹಿತರೆಲ್ಲ ಸೇರಿ ಪಾರ್ಟಿ ಮಾಡಿದ್ದಾರೆ. ಈ ವೇಳೆ ಕ್ಷುಲ್ಲಕ ವಿಚಾರವಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿ ಈ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಇಂದು ಮುಂಜಾನೆ ಈ ಪ್ರಕರಣ ಬೆಳಕಿಗೆ ಬಂದಿದ್ದು, ಕೊಲೆಯಾದ ವ್ಯಕ್ತಿ ಯಾರೆಂಬುದು ತಿಳಿದುಬಂದಿಲ್ಲ.  ಸುದ್ದಿ ತಿಳಿದ ಮಡಿವಾಳ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಶವವನ್ನು ಸೆಂಟ್‍ಜಾನ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೊಳಪಡಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Sri Raghav

Admin