ಹಳೇ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಧರಣಿ
ಬಾಗೇಪಲ್ಲಿ, ಏ.26 – 7ನೇ ವೇತನ ಆಯೋಗ ಶಿಫಾರಸ್ಸು, ನೂತನ ಪಿಂಚಣಿಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿಯೋಜನೆಯನ್ನು ಜಾರಿಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಎದುರು ನಡೆಸಿದ ಸಾಂಕೇತಿಕ ಧರಣಿಯಲ್ಲಿ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಪಿ.ಎನ್.ನಾರಾಯಣಸ್ವಾಮಿ ಒತ್ತಾಯಿಸಿದರು.ಪ್ರಾಥಮಿಕ ಶಿಕ್ಷಣದ ಅಭಿವೃದ್ಧಿಗೆ ಪ್ರಾಥಮಿಕ ಶಿಕ್ಷಣ ಮಂಡಳಿಯನ್ನು ಸ್ಥಾಪಿಸಬೇಕು ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಎಲ್ಕೆಜಿ, ಯುಕೆಜಿ ಆರಂಭಿಸಬೇಕೆಂದು ಆಗ್ರಹಿಸಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ವೆಂಕಟರವಣಪ್ಪ ಮಾತನಾಡಿ, ಇಡೀ ದೇಶದಲ್ಲಿಯೇ ಕರ್ನಾಟಕ ರಾಜ್ಯದಲ್ಲಿ ಶಿಕ್ಷಕರಿಗೆ ನೀಡುವ ವೇತನದಲ್ಲಿ ತಾರತಮ್ಯ ಮಾಡಲಾಗಿದೆ ಕೂಡಲೇ ಸಂಬಂಧಪಟ್ಟವರು ವೇತನವನ್ನು ಸರಿಪಡಿಸಬೇಕೆಂದು ಒತ್ತಾಯಿಸಿದರು. ಸ್ಥಳಕ್ಕೆ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಆದಿಲಕ್ಷ್ಮಮ್ಮ ಧರಣಿ ನಿರತರಿಂದ ಮನವಿ ಸ್ವೀಕರಿಸಿ ಕೂಡಲೇ ನಿಮ್ಮ ಮನವಿಯನ್ನು ಸಂಬಂಧಪಟ್ಟ ಮೇಲಿನ ಅಧಿಕಾರಿಗಳಿಗೆ ಸಲ್ಲಿಸಲಾಗುವುದೆಂದು ತಿಳಿಸಿದರು.ಸಾಂಕೇತಿಕ ಧರಣಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಸಿ.ವೆಂಕಟರವಣಪ್ಪ, ಆರ್.ಶೈಲಾ, ಸಹಕಾರ್ಯದರ್ಶಿಗಳಾದ ಪ್ರಭಾವತಿ, ಸಿ.ಎನ್.ಗಂಗಾಧರ, ಬಿ.ವಿ.ಶಿವಯ್ಯ, ವಿ.ಸತ್ಯನಾರಾಯಣ, ಸಂಘಟನಾ ಕಾರ್ಯದರ್ಶಿಗಳಾದ ವೆಂಕಟರೆಡ್ಡಿ, ಪಿ.ಎಸ್.ಸೋಮಶೇಖರರೆಡ್ಡಿ, ವರಲಕ್ಷ್ಮಮ್ಮ ಸದಸ್ಯರಾದ ವೈ.ಎಸ್.ಪ್ರಮೀಳ, ಎಂ.ನಾರಾಯಣಸ್ವಾಮಿ, ಎ.ವೆಂಕಟೇಶ್ವರ, ಎಂ.ಮದ್ದಿರೆಡ್ಡಿ, ನಾಮನಿರ್ದೇಶಿತ ಸದಸ್ಯರಾದ ತಿಮ್ಮರಾಜು, ವಿ.ಸುಮ ಭಾಗವಹಿಸಿದ್ದರು.
< Eesanje News 24/7 ನ್ಯೂಸ್ ಆ್ಯಪ್ >