ಹಾಡಹಗಲೇ ನಡುರಸ್ತೆಯಲ್ಲೇ ರೌಡಿಶೀಟರ್ ಬರ್ಬರ ಹತ್ಯೆ

Murder-Bengaluru

ಬೆಂಗಳೂರು, ಜು.28-ನಡುರಸ್ತೆಯಲ್ಲೇ ರೌಡಿಶೀಟರ್‍ನನ್ನು ಲಾಂಗ್ ಮತ್ತು ಮಚ್ಚುಗಳಿಂದ ಮನಬಂದಂತೆ ಕೊಚ್ಚಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಗರಾಜ್ ಅಲಿಯಾಸ್ ಡಿಂಗ್ರಿ ನಾಗರಾಜ್ ಕೊಲೆಯಾದ ರೌಡಿಶೀಟರ್. ತಾವರೆಕೆರೆ ಪೊಲೀಸ್ ಠಾಣೆಯ ರೌಡಿ ಪಟ್ಟಿಯಲ್ಲಿ ಈತನ ಹೆಸರಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಂಜೆಗೆ ತಿಳಿಸಿದ್ದಾರೆ.

ಇಂದು ಮಧ್ಯಾಹ್ನ 12ರ ಸಮಯದಲ್ಲಿ ನಾಗರಾಜ್ ತಾವರೆಕೆರೆ ವ್ಯಾಪ್ತಿಯ ಹೊನ್ನಿಗನಹಟ್ಟಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಮತ್ತು ಬೈಕ್‍ನಲ್ಲಿ ಹಿಂಬಾಲಿಸಿ ಬಂದ ಐದು ಮಂದಿ ದುಷ್ಕರ್ಮಿಗಳು ಏಕಾಏಕಿ ಲಾಂಗ್ ಮತ್ತು ಮಚ್ಚುಗಳಿಂದ ಮನಬಂದಂತೆ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸುದ್ದಿ ತಿಳಿದು ತಾವರೆಕೆರೆ ಠಾಣೆ ಡಿವೈಎಸ್ಪಿ ಪುರುಷೋತ್ತಮ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಾಡಹಗಲೇ ಈ ಘಟನೆ ನಡೆದಿದ್ದು, ಸುತ್ತಮುತ್ತಲಿನ ಗ್ರಾಮಗಳ ನಾಗರಿಕರನ್ನು ಬೆಚ್ಚಿಬೀಳಿಸಿದೆ.   ಈ ಬಗ್ಗೆ ತಾವರೆಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಾಗಿ ಶೋಧ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Sri Raghav

Admin