ಹುಬ್ಬಳ್ಳಿಯಲ್ಲಿ ಐಪಿಎಲ್ ಬೆಟ್ಟಿಂಗ್, ಇಬ್ಬರ ಬಂಧನ

IPL-Betting--01

ಹುಬ್ಬಳ್ಳಿ, ಏ.16-ಐಪಿಎಲ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿರುವ ಹಳೇ ಹುಬ್ಬಳ್ಳಿ ಪೊಲೀಸರು 6 ಮೊಬೈಲ್, ಆರೂವರೆ ಸಾವಿರ ನಗದು ಮತ್ತು ಟಿವಿಯನ್ನು ವಶಪಡಿಸಿಕೊಂಡಿದ್ದಾರೆ. ಮಂಜುನಾಥ್ ಮಿಸ್ಕಿನ್ ಮತ್ತು ರಾಜೇಶ್ ಗುಡಿ ಬಂಧಿತರು. ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಇವರನ್ನು ಖಚಿತ ಮಾಹಿತಿ ಮೇರೆಗೆ ಠಾಣೆಯ ಪಕ್ಕದ ದಿಡ್ಡಿ ಓಣಿಯಲ್ಲಿ ಕಾರ್ಯಾಚರಣೆ ನಡೆಸಿ ಪೊಲೀಸರು ಬಂಧಿಸಿದ್ದಾರೆ. ಹಳೇ ಹುಬ್ಬಳ್ಳಿ ಠಾಣೆ ಇನ್ಸ್‍ಪೆಕ್ಟರ್ ಶ್ರೀಪಾದ ಜಲ್ದೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin