ಹೆದ್ದಾರಿಗಳಲ್ಲಿ ಮದ್ಯದಂಗಡಿಗಳ ನಿಷೇಧದಿಂದ 10 ಲಕ್ಷ ಉದ್ಯೋಗಕ್ಕೆ ಕುತ್ತು

Spread the love

High-Way

ನವದೆಹಲಿ, ಏ.3-ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಮದ್ಯದಂಗಡಿಗಳಿಗೆ ಸುಪ್ರೀಂಕೋರ್ಟ್ ನಿಷೇಧ ವಿಧಿಸಿರುವುದರಿಂದ ದೇಶಾದ್ಯಂತ 10 ಲಕ್ಷಕ್ಕೂ ಹೆಚ್ಚು ಮಂದಿ ಉದ್ಯೋಗ ಕಳೆದುಕೊಳ್ಳುವ ಆತಂಕ ಎದುರಾಗಿದೆ.   ಕೇಂದ್ರ ಸರ್ಕಾರದ ನೀತಿ ಆಯೋಗದ ಮುಖ್ಯಸ್ಥ ಅಮಿತಾಭ್ ಕಾಂತ್ ಈ ಅಂಕಿ-ಅಂಶ ನೀಡಿದ್ದು, ಸುಪ್ರೀಂಕೋರ್ಟ್ ಆದೇಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.   ನ್ಯಾಯಾಲಯದ ನಿರ್ಧಾರದಿಂದ ದೇಶದ ಪಶ್ಚಿಮ ಭಾಗವೊಂದರಲ್ಲೇ 40 ಸಾವಿರ ಮಂದಿ ಉದ್ಯೋಗಕ್ಕೆ ಕುತ್ತುಂಟಾಗಿದೆ. ಈ ತೀರ್ಪಿನಿಂದ ಪ್ರವಾಸೋದ್ಯಮದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ ಎಂದು ಅವರು ಟ್ವೀಟ್‍ನಲ್ಲಿ ಹೇಳಿದ್ದಾರೆ.

ಹೆದ್ದಾರಿಗಳ 500 ಮೀ. ವ್ಯಾಪ್ತಿಯೊಳಗಿರುವ ಹಾಗೂ 20,000 ಜನಸಂಖ್ಯೆಗಿಂತ ಕಡಿಮೆ ಇರುವ ಪ್ರದೇಶಗಳಲ್ಲಿ 220 ಮೀ.ಅಂತರದೊಳಗೆ ಇರುವ ಮದ್ಯದಂಗಡಿಗಳನ್ನು ಏ.1ರಿಂದ ಸುಪ್ರೀಂಕೋರ್ಟ್ ನಿಷೇಧಿಸಿದೆ. ಈ ಆದೇಶದಿಂದಾಗಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿನ ಎನ್‍ಎಚ್ ಮತ್ತು ಎಸ್‍ಎಚ್‍ಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮದ್ಯದಂಗಡಿಗಳು ಬಂದ್ ಆಗಿದ್ದು, ಮಾಲೀಕರು ಮತ್ತು ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin