ಹೆದ್ದಾರಿ ಪಕ್ಕದ ಕಲ್ಲಿಗೆ ಡಿಕ್ಕಿ ಹೊಡೆದ ಕಾರು : ಪಿಎಸ್ಐ ಸಾವು, ಎಎಸ್ಐಗೆ ಗಂಭೀರ ಗಾಯ
ಬೆಳಗಾವಿ,ಡಿ.30- ಚಾಲಕನ ನಿಯಂತ್ರಣ ತಪ್ಪಿ ಹೈವೇ ಪಕ್ಕದ ಕಲ್ಲಿಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾದ ಪರಿಣಾಮ ಪಿಎಸ್ಐ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಎಸ್ಐ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ತಾಲ್ಲೂಕಿನ ಉಕ್ಕಡ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಇಂದು ಬೆಳಗಿನಜಾವ ನಡೆದಿದೆ. ಪಿಎಸ್ಐ ರಾಮಚಂದ್ರ ಬಳ್ಳಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದು , ಕಾರಿನಲ್ಲಿದ್ದ ಇನ್ಸ್ಪೆಕ್ಟರ್ ಪ್ರಾಣೇಶ್ ಯಾವಗಲ್ಗೆ ತೀವ್ರ ಗಾಯವಾಗಿದ್ದು , ಅವರನ್ನು ಕೆಎಲ್ಇ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ರಾಮಚಂದ್ರ ಬಳ್ಳಾರಿಯವರು ಐಜಿ ಕಚೇರಿಯಲ್ಲಿನ ನಾಗರಿಕ ಹಕ್ಕು ಜಾರಿ ವಿಭಾಗದ ಪಿಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಎಸ್ಐ ಪ್ರಾಣೇಶ್ ಯಾವಗಲ್ ಬೆಳಗಾವಿ ಜಿಲ್ಲಾ ಪೊಲೀಸ್ ನಿಯಂತ್ರಣ ರೂಮ್ನ ಇನ್ಸ್ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದರು. ಸ್ಥಳಕ್ಕೆ ಕಾಕತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.