1 ರಿಂದ 10ನೇ ತರಗತಿಯ ಪಠ್ಯಕ್ರಮ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ

Spread the love

Education

ಬೆಂಗಳೂರು,ಡಿ.14– ಬರುವ ಶೈಕ್ಷಣಿಕ ವರ್ಷದಿಂದಲೇ ಅನ್ವಯವಾಗುವಂತೆ 1ರಿಂದ 10ನೇ ತರಗತಿಯ ಪರಿಷ್ಕøತ ಪಠ್ಯಕ್ರಮ ಜಾರಿಯಾಗಲಿದೆ ಎಂದು ಸಾಹಿತಿ ಹಾಗೂ ಪಠ್ಯಕ್ರಮ ಪರಿಷ್ಕರಣ ಸಮಿತಿ ಅಧ್ಯಕ್ಷ ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.   ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2017-18ರ ಶೈಕ್ಷಣಿಕ ವರ್ಷದಿಂದಲೇ 1ರಿಂದ 10ನೇ ತರಗತಿಯ ಹೊಸ ಪಠ್ಯಕ್ರಮ ಜಾರಿಗೆ ಬರಲಿದೆ. ಈಗಾಗಲೇ ಇದಕ್ಕೆ ಎಲ್ಲ ಪೂರ್ವ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ವಿವರಿಸಿದರು.

ಪಠ್ಯಪುಸ್ತಕ ಪರಿಷ್ಕರಣೆ ಮಾಡುವ ಸಂಬಂಧ ರಾಜ್ಯ ಸರ್ಕಾರ ಒಟ್ಟು 27 ಸಮಿತಿಗಳನ್ನು ರಚನೆ ಮಾಡಲಾಗಿತ್ತು. ನಾನು ಈ ಸಮಿತಿಯ ಹಿರಿಯ ಅಧ್ಯಕ್ಷನಾಗಿದ್ದರೆ ಉಳಿದ ಎಲ್ಲ ಸಮಿತಿಗಳಿಗೂ ಒಬೊಬ್ಬ ಅಧ್ಯಕ್ಷರನ್ನು ನೇಮಕ ಮಾಡಿದ್ದಾಗಿ ನುಡಿದರು.  ಗಣಿತ, ಸಮಾಜವಿಜ್ಞಾನ ಹಾಗೂ ವಿಜ್ಞಾನ ಪಠ್ಯಪುಸ್ತಕಗಳ ಪರಿಷ್ಕøತ ಅನುವಾದ ಶೇ.20ರಷ್ಟು ಅನುವಾದ ಮುಗಿದಿದೆ. ಉಳಿದಿರುವ ಅನುವಾದವನ್ನು ಪೂರ್ಣಗೊಳಿಸಲು ಸಿದ್ದತೆ ನಡೆಸಿದ್ದೇವೆ. ಶೈಕ್ಷಣಿಕ ವರ್ಷ ಆರಂಭವಾಗುವುದರೊಳಗೆ ಪರಿಷ್ಕøತ ಪಠ್ಯಪುಸ್ತಕ ವಿದ್ಯಾರ್ಥಿಗಳಿಗೆ ಲಭ್ಯವಾಗಲಿದೆ ಎಂದರು.

ರಾಜಕೀಯ ಪಕ್ಷಗಳ ಮುಖವಾಣಿಯಾಗಬಾರದು:

ವಿದ್ಯಾರ್ಥಿಗಳ ಪಠ್ಯ ಪುಸ್ತಕ ಯಾವುದೇ ಪಕ್ಷದ ಮುಖವಾಣಿಯಾಗಬಾರದು. ಹಾಲಿ ಇರುವ ಪಠ್ಯ ಪುಸ್ತಕದಲ್ಲಿ ಕೇಸರೀಕರಣವಾಗಿದೆ ಎಂಬ ಆರೋಪ ಕೇಳಿಬಂದಿತ್ತು.   ಬಿಜೆಪಿ, ಕಾಂಗ್ರೆಸ್ ಎನ್ನದೆ ವಿದ್ಯಾರ್ಥಿಗಳ ಹಿತದೃಷ್ಟಿ ಇಟ್ಟುಕೊಂಡು ಪಠ್ಯಪುಸ್ತಕಗಳ ರಚನೆ ಮಾಡುವುದು ಅಗತ್ಯ. ವಿದ್ಯಾರ್ಥಿಗಳನ್ನು ರೂಪಿಸಬೇಕಾದರೆ ಯಾವುದೇ ಅಜೆಂಡಾಗಳು ಅಡ್ಡಿಯಾಗಬಾರದು ಎಂದು ಸಲಹೆ ಮಾಡಿದರು.  ನಮ್ಮ ಸಮಿತಿ ಸರ್ಕಾರಕ್ಕೆ ಯಾವುದೇ ವರದಿ ಸಲ್ಲಿಸುವುದಿಲ್ಲ. ನಾವು ಪಠ್ಯಪುಸ್ತಕದಲ್ಲಿರುವ ಲೋಪದೋಷಗಳನ್ನು ಪತ್ತೆ ಮಾಡಿ ಸರಿಪಡಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಸಾಮಾಜಿಕ, ಮಹಿಳಾ, ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ನ್ಯಾಯ ಸೇರಿದಂತೆ ವಿವಿಧ ಕ್ಷೇತ್ರಗಳ ಲೋಪದೋಷಗಳನ್ನು ಸರಿಪಡಿಸಿಕೊಂಡು ಎಲ್ಲಿ ಬದಲಾವಣೆ ಮಾಡಬೇಕೆಂಬುದರ ಬಗ್ಗೆ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.   ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಕರೆಯುವಂತೆ ಮನವಿ ಮಾಡಿಕೊಂಡಿದ್ದೆ. ಅದರಂತೆ ಇಂದಿನ ಸಭೆಯಲ್ಲಿ ಪಠ್ಯ ಪುಸ್ತಕ ಪರಿಷ್ಕøತ ಸೇರಿದಂತೆ ಶಿಕ್ಷಣ ಸುಧಾರಣೆಯ ಬಗ್ಗೆಯೂ ಚರ್ಚೆ ನಡೆಸಲಾಗಿದೆ.   ಕೇಂದ್ರ ಪಠ್ಯಪುಸ್ತಕಕ್ಕೆ ಸರಿಸಮನಾಗಿ ನಮ್ಮ ವಿದ್ಯಾರ್ಥಿಗಳನ್ನು ಭವಿಷ್ಯಕ್ಕೆ ಸಜ್ಜುಗೊಳಿಸುವುದು ನಮ್ಮೆಲ್ಲರ ಹೊಣೆಯಾಗಿದೆ. ಇದಕ್ಕಾಗಿ ಪರಿಷ್ಕøತ ಪಠ್ಯಪುಸ್ತಕದಲ್ಲಿ ಕೌಶಲ್ಯಾಧಾರಿತ ಚಟುವಟಿಕೆಗಳನ್ನು ಅಳವಡಿಸಲು ಶಿಫಾರಸು ಮಾಡಲಾಗಿದೆ ಎಂದು ತಿಳಿಸಿದರು.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Sri Raghav

Admin