Thursday, December 12, 2024
Homeರಾಷ್ಟ್ರೀಯ | Nationalಕೇರಳ : ಅಕ್ರಮ ಪಟಾಕಿ ಗೋದಾಮಿನಲ್ಲಿ ಭಾರೀ ಸ್ಫೋಟ, ಓರ್ವ ಸಾವು, ಹಲವರಿಗೆ ಗಾಯ

ಕೇರಳ : ಅಕ್ರಮ ಪಟಾಕಿ ಗೋದಾಮಿನಲ್ಲಿ ಭಾರೀ ಸ್ಫೋಟ, ಓರ್ವ ಸಾವು, ಹಲವರಿಗೆ ಗಾಯ

ಕೊಚ್ಚಿ, -ಫೆ.12: ಇಲ್ಲಿಗೆ ಸಮೀಪದ ತ್ರಿಪುಣಿತುರಾದಲ್ಲಿ ವಸತಿ ಪ್ರದೇಶದಿಂದ ನಡೆಯುತ್ತಿದ್ದ ಅಕ್ರಮ ಪಟಾಕಿ ಗೋದಾಮಿನಲ್ಲಿಂದು ಸಂಭವಿಸಿದ ಭಾರೀ ಸೋಟದಲ್ಲಿ ಒಬ್ಬ ಸಾವನ್ನಪ್ಪಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 16 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡಿರುವ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ವೈದ್ಯಕೀಯ ತಜ್ಞರ ಚಿಕಿತ್ಸೆಗಾಗಿ ಅವರನ್ನು ಸಮೀಪದ ಆಸ್ಪತ್ರೆಯಿಂದ ಕಲಮಸ್ಸೆರಿ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ವ್ಯಕ್ತಿಯನ್ನು ತಿರುವನಂತಪುರಂ ಮೂಲದ ವಿಷ್ಣು ಎಂದು ಗುರುತಿಸಲಾಗಿದೆ .ಸೋಟದಲ್ಲಿ ಸುತ್ತಮುತ್ತಲಿನ 25 ಕ್ಕೂ ಹೆಚ್ಚು ಮನೆಗಳು ಮತ್ತು ಕೆಲವು ಅಂಗಡಿಗಳು ತೀವ್ರವಾಗಿ ಹಾನಿಗೊಳಗಾಗಿವೆ ಮತ್ತು ಎರಡು ವಾಹನಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ ಮತ್ತು ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ ಗೋದಾಮಿಗೆ ತಂದಿದ್ದ ಪಟಾಕಿಗಳ ಬೃಹತ್ ಸಂಗ್ರಹ ಒಟ್ಟಿಗೆ ಸೋಟಗೊಂಡಿರುವ ಶಂಕೆ ಇದೆ ಎಂದು ಅಗ್ನಿಶಾಮಕ ಮತ್ತು ಪಾರುಗಾಣಿಕಾ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದು ಭಾರೀ ಸೋಟವಾಗಿದ್ದು, ಹಲವಾರು ಕಿಮೀ ದೂರದಲ್ಲಿ ಜನರು ಭೂಮಿ ನಡುಗಿದ ಅನುಭವವಾಗಿದೆ ಸ್ಥಳೀಯ ಅಗ್ನಿಶಾಮಕ ಠಾಣೆಯಲ್ಲೂ ಕಂಪನದ ಅನುಭವವಾಗಿದೆ ಎಂದು ಅವರು ಹೇಳಿದರು ಮತ್ತು ಸೋಟದ ದೊಡ್ಡ ಶಬ್ದದಿಂದ ಜನರು ಆತಂಕಗೊಂಡಿದ್ದಾರೆ.
ದಟ್ಟ ಜನನಿಬಿಡ ಪ್ರದೇಶದಲ್ಲಿ ಪಟಾಕಿ ಗೋದಾಮು ನಡೆಸುತ್ತಿರುವ ಬಗ್ಗೆ ನಮಗೆ ಯಾವುದೇ ಸುಳಿವು ಇರಲಿಲ್ಲ. ಅದನ್ನು ನಿರ್ವಹಿಸುವವರು ಅದಕ್ಕೆ ಯಾವುದೇ ಅನುಮತಿಯನ್ನು ಪಡೆದಿಲ್ಲ ಎಂದು ಸಹಾಯಕ ಠಾಣಾಧಿಕಾರಿ ಮಾಧ್ಯಮಗಳಿಗೆ ತಿಳಿಸಿದರು.

ರಾಜ್ಯಪಾಲರ ಭಾಷಣದಲ್ಲಿ ಉಪ್ಪು, ಹುಳಿ, ಖಾರ ಯಾವುದೂ ಇಲ್ಲ : ಕುಮಾರಸ್ವಾಮಿ

ವಾಹನದಿಂದ ಪಟಾಕಿಗಳನ್ನು ಗೋದಾಮಿಗೆ ಇಳಿಸುವಾಗ ಈ ಅನಾಹುತ ಸಂಭವಿಸಿದೆ ಎಂದು ಸ್ಥಳೀಯ ಜನರು ಮಾಹಿತಿಯ ನೀಡಿದ್ದಾರೆ.ಈ ಪ್ರದೇಶದಲ್ಲಿ ಗೋದಾಮು ಸ್ವಲ್ಪ ಸಮಯದಿಂದ ಕಾರ್ಯನಿರ್ವಹಿಸುತ್ತಿದೆ ಮತ್ತು ಸ್ಥಳೀಯ ದೇವಾಲಯದ ಉತ್ಸವದ ಭಾಗವಾಗಿ ಪಟಾಕಿಗಳನ್ನು ಸಂಗ್ರಹಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಪ್ರದೇಶದಲ್ಲಿ ಎರಡು ಅಂತಸ್ತಿನ ಕಟ್ಟಡಗಳ ಮೇಲ್ಛಾವಣಿ ತೀವ್ರವಾಗಿ ಹಾನಿಗೀಡಾಗಿರುವುದು ಕಂಡುಬಂದಿದೆ. ಸೋಟದ ಪ್ರಭಾವದಿಂದ ಅನೇಕ ಮನೆಗಳ ಬಾಗಿಲು ಮತ್ತು ಕಿಟಕಿಗಳು ಗೋಡೆಯಿಂದ ಹಾರಿಹೋಗಿವೆ ಮತ್ತು ಪೋರ್ಟಿಕೋಗಳಲ್ಲಿ ನಿಲ್ಲಿಸಲಾಗಿದ್ದ ಕಾರುಗಳ ಮೇಲೆ ಇಟ್ಟಿಗೆಗಳು ಮತ್ತು ಹೆಂಚುಗಳು ಬಿದ್ದು ನಾಶವಾಗಿವೆ.

ಬೆಂಕಿಯಿಂದಾಗಿ ಎತ್ತರದ ಮರಗಳು ಸಹ ಸಂಪೂರ್ಣವಾಗಿ ಸುಟ್ಟುಹೋದವು, ಸೋಟದ ಅವಶೇಷಗಳು ಹಲವಾರು ಮೀಟರ್ ದೂರದಲ್ಲಿ ಕಾಣಿಸಿಕೊಂಡಿದೆ ಹಿರಿಯ ಅಧಿದಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

Latest News