ಬೆಳಗಾವಿ, ಡಿ.22- ಮುಂದಿನ ಬಜೆಟ್ ಅಧಿವೇಶನದ ವೇಳೆಗೆ ಬರೋಬ್ಬರಿ ಒಂದು ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ವಿಧಾನ ಪರಿಷತ್ತಿಗೆ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಸಿ.ಎನ್.ಮಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ರಾಜ್ಯದಲ್ಲಿ ವಿವಿಧ ಇಲಾಖೆಗಳ ವಿವಿಧ ವೃಂದದ 7.60ಲಕ್ಷ ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ ಈಗಾಗಲೇ 5.11ಲಕ್ಷ ಹುದ್ದೆಗಳು ಭರ್ತಿಯಾಗಿದವೆ. ಇನ್ನೂ ಉಳಿದ 2.50 ಲಕ್ಷ ಹುದ್ದೆಗಳ ಖಾಲಿ ಇವೆ. ಈ ಹುದ್ದೆಗಳ ಭರ್ತಿ ಪ್ರಕ್ರಿಯೆ ಭಾಗವಾಗಿ ಮುಂದಿನ ಬಜೆಟ್ ಅಧಿವೇಶನವರೆಗೆ ಒಂದು ಲಕ್ಷ ಹುದ್ದೆಗಳನ್ನು ಆದ್ಯತೆ ಮೇಲೆ ತುಂಬಲಾಗುವುದು ಎಂದರು.
ತುರ್ತು ಅಗತ್ಯವಿರುವ ಒಂದು ಲಕ್ಷ ಹುದ್ದೆಗಳನ್ನು ಆದ್ಯತೆ ಮೇಲೆ ಗುರುತಿಸಲು ಸೂಚಿಸಲಾಗಿದೆ. ಸಿ ಮತ್ತು ಡಿ ದರ್ಜೆ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಲಾಗಿದೆ. ಖಾಲಿ ಇರುವ ಎ ಮತ್ತು ಬಿ ದರ್ಜೆ ಹುದ್ದೆಗಳಿಗೆ ಹಾಲಿ ಇರುವ ಅಧಿಕಾರಿಗಳಿಗೆ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ ಎಂದು ಹೇಳಿದರು.
ಸಂಸತ್ನಲ್ಲಿ ಮಾಸ್ಕ್ ಧರಿಸಲು ಸಂಸದರಿಗೆ ಸಭಾಧ್ಯಕ್ಷರ ಸೂಚನೆ
ರಾಜ್ಯ ಸರ್ಕಾರದಲ್ಲಿ ಒಟ್ಟು 43 ವಿವಿಧ ಇಲಾಖೆಗಳಿವೆ. ಎ ಯಿಂದ ಡಿ ದರ್ಜೆ ವರೆಗಿನ ಹುದ್ದೆಗಳನ್ನು ನಾವು ಭರ್ತಿ ಮಾಡಲಿದ್ದೇವೆ. ಮಂಜೂರಾದ ಹುದ್ದೆಗಳ ಪೈಕಿ ಶೇ. 34ರಷ್ಟು ಹುದ್ದೆಗಳು ಖಾಲಿ ಇವೆ. ಆದರೂ, ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಖಾಲಿಯಿರುವ ಹುದ್ದೆಗಳಲ್ಲಿ ಹೆಚ್ಚುವರಿ ಪ್ರಭಾರದಲ್ಲಿರಿಸಿ ದೈನಂದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ವ್ಯವಸ್ಥೆ ಮಾಡಲಾಗಿದೆ. ಇದರಿಂದ ಸಾರ್ವಜನಿಕರ ಕೆಲಸ ಕಾರ್ಯಗಳು ವಿಳಂಬವಾಗುವುದಿಲ್ಲ ಎಂದು ಅವರು ತಿಳಿಸಿದರು.
ಕೋವಿಡ್ ನೆಪದಲ್ಲಿ ಚುನಾವಣೆ ಮುಂದೂಡುವ ಯತ್ನ ನಡೀತಿದೆ : ಡಿಕೆಶಿ
ಇದಕ್ಕೂ ಮುನ್ನ ಮಾತನಾಡಿದ ಸದಸಯ ಸಿ.ಎನ .ಮಂಜೇಗೌಡ ಅವರು, ಕಾನೂನು ಇಲಾಖೆ 26 ಸಾವಿರ ಹುದ್ದೆ ಖಾಲಿಯಾಗಿವೆ. ಶಿಕ್ಷಣ, ಗ್ರಾಮೀಣಾಭಿವೃದ್ಧಿ ಸೇರಿದಂತೆ ಹಲವು ಇಲಾಖೆಗಳಲ್ಲಿ ಖಾಲಿ ಹುದ್ದೆಗಳು ಬಿದ್ದಿವೆ. ಇನ್ನೂ, ಗುತ್ತಿಗೆ ಆಧಾರದಲ್ಲಿ ಕೆಲಸ ನಡೆದರೆ ಖಾಸಗಿ ಮಾಹಿತಿ ಸೋರಿಕೆಯಾಗುವ ಸಂಭವ ಇದೆ ಎಂದರು.
1 lakh jobs, two months, CM Bommai,