10 ರಕ್ತಚಂದನ ತುಂಡುಗಳು : ಇಬ್ಬರು ಆರೋಪಿಳ ಬಂಧನ
ಮೈಸೂರು, ಫೆ.27-ನಗರದ ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ರಕ್ತಚಂದನದ 10 ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.ಅನಿಲ್ಕುಮಾರ್, ವೇಣುಗೋಪಾಲ್ ಬಂಧಿತ ಆರೋಪಿಗಳು.ಬಂಧಿತರು ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಪುತಲಿ ಉದ್ಯಾನವನದ ಬಳಿ ರಕ್ತಚಂದನದ ತುಂಡುಗಳನ್ನು ಇಟ್ಟುಕೊಂಡು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದರಿಂದ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.ಈ ಬಗ್ಗೆ ಮಂಡಿ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಸಿಸಿಬಿ ಇನ್ಸ್ಪೆಕ್ಟರ್ ಪ್ರಕಾಶ್, ಸಿಬ್ಬಂದಿ ಆರೋಪಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments