ವ್ಯಾನ್‍ಗೆ ವಿದ್ಯುತ್ ಸ್ಪರ್ಶಿಸಿ 10 ಶಿವಭಕ್ತರ ಸಾವು..!

Social Share

ಕೋಲ್ಕತ್ತಾ, ಆ.1- ಶಿವಭಕ್ತರನ್ನು ಹೊತ್ತೊಯ್ಯುತ್ತಿದ್ದ ಪಿಕಪ್ ವ್ಯಾನ್‍ಗೆ ವಿದ್ಯತ್ ಸ್ಪರ್ಶಗೊಂಡು 10 ಯಾತ್ರಿಗಳು ಸಾವನ್ನಪ್ಪಿದ್ದು, 19 ಮಂದಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಕೂಚ್ ಬೆಹಾರ್‍ನಲ್ಲಿ ತಡರಾತ್ರಿ ನಡೆದಿದೆ.

ಘಟನೆಯಲ್ಲಿ ಗಾಯಗೊಂಡ ಎಲ್ಲರನ್ನು ಚಂಗ್ರಬಂಧ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈ ಪೈಕಿ 16 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರು ಜಲ್ಪೈಗುರಿ ಆಸ್ಪತ್ರೆಗೆ ಶಿಫಾರಸ್ಸು ಮಾಡಿದ್ದಾರೆ. ವಾಹನದಲ್ಲಿದ್ದ ಡಿಜೆ ಸಿಸ್ಟಂನ ಜನರೇಟರ್‍ನ ವೈರಿಂಗ್‍ನಿಂದ ವಿದ್ಯುಘಾತ ಉಂಟಾಗಿ ಈ ಘಟನೆ ಸಂಭವಿಸಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯರಾತ್ರಿ, ಮೇಖ್ಲಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಧಾರ್ಲಾ ಸೇತುವೆಯಲ್ಲಿ ಘಟನೆಯೊಂದು ನಡೆದಿದೆ, ಜಲಪೇಶ್‍ಗೆ ತೆರಳುತ್ತಿದ್ದ ಕನ್ವಾರಿಯಾಗಳನ್ನು ಹೊತ್ತೊಯ್ಯುತ್ತಿದ್ದ ಪಿಕ್‍ಅಪ್ ವ್ಯಾನ್‍ಗೆ ವಿದ್ಯುತ್ ಸ್ಪರ್ಶವಾಗಿದೆ. ಪ್ರಾಥಮಿಕ ವಿಚಾರಣೆಯ ಪ್ರಕಾರ, ಡಿಜೆ ಸಿಸ್ಟಂನ ಜನರೇಟರ್ ಅನ್ನು ವಾಹನದ ಹಿಂಭಾಗದಲ್ಲಿ ಅಳವಡಿಸಲಾಗಿದೆ ಎಂದು ಮಠಭಂಗ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ವರ್ಮಾ ತಿಳಿಸಿದ್ದಾರೆ.

ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಆದರೆ ಚಾಲಕ ಪರಾರಿಯಾಗಿದ್ದು, ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಇದ್ದು ಪರಿಶೀಲನೆ ನಡೆಸಿದ್ದಾರೆ. ಎಲ್ಲಾ ಪ್ರಯಾಣಿಕರು ಸ್ಟಾಲ್ಕುಚಿ ಪೊಲೀಸ್ ಠಾಣೆ ವ್ಯಾಪ್ತಿಗೆ ಸೇರಿದವರಾಗಿದ್ದು, ಘಟನೆಯ ಬಗ್ಗೆ ಅವರ ಕುಟುಂಬಗಳಿಗೆ ತಿಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Articles You Might Like

Share This Article