ವಾಯುಮಾಲಿನ್ಯ ಜಾಗೃತಿ ಮಾಸಾಚರಣೆಗೆ 10 ಲಕ್ಷ ರೂ. ವೆಚ್ಚ

ಬೆಂಗಳೂರು,ಜ.24-ರಾಜ್ಯಾದ್ಯಂತ ನವೆಂಬರ್ ತಿಂಗಳಿನಲ್ಲಿ ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಮಾಸವನ್ನಾಗಿ ಆಚರಿಸಿದ ಸಾರಿಗೆ ಇಲಾಖೆಗೆ ಹತ್ತು ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ನವೆಂಬರ್ ತಿಂಗಳಿನಲ್ಲಿ ರಾಜ್ಯಾದ್ಯಂತ ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಮಾಸವನ್ನಾಗಿ ಆಚರಿಸಿದ ಸಾರಿಗೆ ಇಲಾಖೆಯ ಎಲ್ಲ ಅೀನ ಕಚೇರಿಗಳಿಗೆ ಈ ಹಣ ಬಿಡುಗಡೆ ಮಾಡಲಾಗಿದೆ.

ಜಾಗೃತಿ ಮಾಸಾಚರಣೆಗೆ ಭರಿಸಲಿರುವ ವೆಚ್ಚವನ್ನು ಮೂರು ಮತ್ತು 4ನೇ ತ್ರೈಮಾಸಿಕ ಕಂತುಗಳಲ್ಲಿ ಬಿಡುಗಡೆ ಮಾಡಿರುವುದಾಗಿ ಸಾರಿಗೆ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ನವೆಂಬರ್ ತಿಂಗಳನ್ನು ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಮಾಸವನ್ನಾಗಿ ಆಚರಿಸಲು 10 ಲಕ್ಷ ರೂ. ಬಿಡುಗಡೆಗೊಳಿಸುವಂತೆ ಕೋರಿದ್ದ ಹಿನ್ನೆಲೆಯಲ್ಲಿ ಈ ಹಣ ಬಿಡುಗಡೆ ಮಾಡಲಾಗಿದೆ.

Sri Raghav

Admin