Wednesday, April 17, 2024
Homeರಾಜ್ಯಬೆಂಗಳೂರು ಒತ್ತಡ ತಗ್ಗಿಸಲು 10 ಮಹಾನಗರಗಳ ಅಭಿವೃದ್ಧಿಗೆ ನಿರ್ಧಾರ

ಬೆಂಗಳೂರು ಒತ್ತಡ ತಗ್ಗಿಸಲು 10 ಮಹಾನಗರಗಳ ಅಭಿವೃದ್ಧಿಗೆ ನಿರ್ಧಾರ

ಬೆಂಗಳೂರು,ಫೆ.16- ಸಿಲಿಕಾನ್ ಸಿಟಿ ಬೆಂಗಳೂರಿನ ಮೇಲಿನ ಒತ್ತಡ ತಗ್ಗಿಸುವ ಉದ್ದೇಶದಿಂದ ರಾಜ್ಯದ ಇತರೆಡೆಗಳಲ್ಲಿ ಆಕರ್ಷಕ ನಗರಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ವಿವಿಧ ಯೋಜನೆಗಳನ್ನು ರೂಪಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್ ಭಾಷಣದಲ್ಲಿ ಅವರು, 10 ಮಹಾನಗರ ಪಾಲಿಕೆಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಎರಡು ಸಾವಿರ ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ, ಕೆಜಿಎಫ್, ತುಮಕೂರಿನ ವಸಂತನರಸಾಪುರ ಮತ್ತು ಬಳ್ಳಾರಿ ನಗರಗಳಲ್ಲಿ ಇಂಟಿಗ್ರೇಟೆಡ್ ಟೌನ್‍ಶಿಪ್‍ಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿಯಲ್ಲಿ ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಉಪನಗರ ಟೌನ್‍ಶಿಪ್‍ಗಳನ್ನು ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಬಜೆಟ್ ನಲ್ಲಿ ಮುಸ್ಲಿಂ ಬಾಂಧವರಿಗೆ ಬಂಪರ್ ಕೊಡುಗೆ ನೀಡಿದ ಸಿದ್ದರಾಮಯ್ಯ

ಬೆಂಗಳೂರಿನ ಬಿಐಇಸಿಯಿಂದ ತುಮಕೂರಿನವರೆಗೆ ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇವನಹಳ್ಳಿಯವರೆಗೆ ಸಾರ್ವಜನಿಕ ಸಹಭಾಗಿತ್ವದಲ್ಲಿ ಮೆಟ್ರೋ ರೈಲು ಯೋಜನೆ ವಿಸ್ತರಿಸುವ ಬಗ್ಗೆ ಕಾರ್ಯಸಾಧ್ಯತಾ ವರದಿ ತಯಾರಿಸಲಾಗುವುದು. ಮೈಸೂರಿನಲ್ಲಿ ಹೆಚ್ಚುತ್ತಿರುವ ಜನದಟ್ಟಣೆ ತಪ್ಪಿಸಲು ಪೆರಿಫೆರಲ್ ರಿಂಗ್ ರಸ್ತೆಯನ್ನು ಪಿಪಿಪಿ ಅಥವಾ ಟೌನ್ ಪ್ಲಾನಿಂಗ್ ಮಾದರಿಯಲ್ಲಿ ನಿರ್ಮಿಸಲು ಕಾರ್ಯಸಾಧ್ಯತಾ ವರದಿ ತಯಾರಿಸಲಾಗುವುದು ಎಂದು ಅವರು ವಿವರಣೆ ನೀಡಿದ್ದಾರೆ.

RELATED ARTICLES

Latest News