ಬೆಂಗಳೂರು,ಅ.22- ಸಿಸಿಬಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ 8 ವಿದೇಶಿ ಡ್ರಗ್ಸ್ ಪೆಡ್ಲರ್ಗಳು ಸೇರಿದಂತೆ 10 ಮಂದಿಯನ್ನು ಬಂಧಿಸಿ, 5 ಕೋಟಿ ಗೂ ಹೆಚ್ಚು ರೂ.ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ನೈಜೀರಿಯಾದ 6, ಸಿನಿಗಲ್ ಹಾಗೂ ಐವರಿಕೋಸ್ಟ್ನ ತಲಾ ಒಬ್ಬರು ಮತ್ತು ಕರ್ನಾಟಕದ ಇಬ್ಬರು ಆರೋಪಿಗಳನ್ನು ಬಂಸಲಾಗಿದೆ ಎಂದು ಸಿಸಿಬಿ ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ 15 ದಿನಗಳಲ್ಲಿ ಕಾಡುಗೋಡಿ, ಕೆ.ಆರ್.ಪುರ, ಸೋಲದೇವನಹಳ್ಳಿ, ಎಚ್.ಎಸ್.ಆರ್. ಲೇ ಔಟ್, ವೈಟ್ಫೀಲ್ಡ್, ಬಾಣಸವಾಡಿ, ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಈ 10 ಡ್ರಗ್ಸ್ಪೆಡ್ಲರ್ ಆರೋಪಿಗಳನ್ನು ಬಂಧಿಸಿ 5,04,30,000 ರೂ. ಮೌಲ್ಯದ ಎನ್ಡಿಎಂಎ ಕ್ರಿಸ್ಟೆಲ್ ಮಾದಕ 3,806 ಕೆ.ಜಿ. ಕೊಕ್ಕೇನ್ 50 ಗ್ರಾಂ., ಎಕ್ಸ್ಟಸಿ ಪಿಲ್ಸ್ 25, ಎಲ್.ಎಸ್ಡಿ ಸ್ಟ್ರಿಪ್ಸ್-50, ಗಾಂಜಾ 5.100 ಕೆ.ಜಿ., ಒಂದು ಕಾರು, ಮೂರು ಬೈಕ್, ಒಂಭತ್ತು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಕಾಡುಗೋಡಿ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ 76,20,000 ರೂ. ಮೌಲ್ಯದ ಮಾದಕ ವಸ್ತು, ಮೊಬೈಲ್ ಫೋನ್, ಕಾರು, ಮೊಬೈಲ್ ಫೋನ್ಗಳನ್ನು ಮತ್ತು ಕೆ.ಆರ್.ಪುರ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ 73,20,000 ಮೌಲ್ಯದ ಮಾದಕ ವಸ್ತು ಹಾಗೂ ಎರಡು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.
ಸೋಲದೇವನಹಳ್ಳಿಯಲ್ಲಿ ಒಬ್ಬ ಆರೋಪಿ 50,40,000 ರೂ. ಮೌಲ್ಯದ ಮಾದಕ ಹಾಗೂ ಮೊಬೈಲ್ ಫೋನ್, ಎಚ್ಎಸ್ಆರ್ ಲೇ ಔಟ್ನಲ್ಲಿ ಒಬ್ಬ ಆರೋಪಿಯಿಂದ 6,00,000 ರೂ. ಮೌಲ್ಯದ ಗಾಂಜಾ, ಮೊಬೈಲ್ ಫೋನ್, ಒಂದು ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.
ವೈಟ್ಫೀಲ್ಡ್ನಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ 36,00,000 ರೂ. ಮೌಲ್ಯದ ಮಾದಕ ವಸ್ತು, ಎರಡು ಮೊಬೈಲ್ ಫೋನ್ ಹಾಗೂ ಎರಡು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.ಬಾಣಸವಾಡಿಯಲ್ಲಿ 4,00,000 ರೂ. ಮೌಲ್ಯದ ಮಾದಕವಸ್ತು, ಮೊಬೈಲ್ ಫೋನ್, ಒಂದು ದ್ವಿಚಕ್ರ ವಾಹನ ಮತ್ತು ಪರಪ್ಪನ ಅಗ್ರಹಾರದಲ್ಲಿ 2.45 ಕೋಟಿ ರೂ. ಮೌಲ್ಯದ ಮಾದಕ ವಸ್ತು, ಒಂದು ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ.
ಬಂತ ಆರೋಪಿಗಳು ಕಡಿಮೆ ಸಮಯದಲ್ಲಿ ಹೆಚ್ಚಿನ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಕಡಿಮೆ ಬೆಲೆಗೆ ನಿಷೇತ ಮಾದಕ ವಸ್ತುಗಳನ್ನು ಖರೀದಿಸಿ ಅವುಗಳನ್ನು ಪರಿಚಯಸ್ಥ ಗಿರಾಕಿಗಳಿಗೆ, ಕಾಲೇಜು ವಿದ್ಯಾರ್ಥಿಗಳಿಗೆ, ಐಟಿಬಿಟಿ ಉದ್ಯೋಗಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಕಾಡುಗೋಡಿ, ಕೆ.ಆರ್.ಪುರ, ಸೋಲದೇವನಹಳ್ಳಿ, ಎಚ್.ಎಸ್.ಆರ್ ಲೇ ಔಟ್, ವೈಟ್ ಫೀಲ್ಡ್, ಬಾಣಸವಾಡಿ, ಪರಪ್ಪನ ಅಗ್ರಹಾರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.