Saturday, July 12, 2025
Homeರಾಜ್ಯಸಂಚಾರ ನಿಯಮ ಉಲ್ಲಂಘಿಸಿದ 10 ಶಾಲಾ ವಾಹನಗಳ ಜಪ್ತಿ

ಸಂಚಾರ ನಿಯಮ ಉಲ್ಲಂಘಿಸಿದ 10 ಶಾಲಾ ವಾಹನಗಳ ಜಪ್ತಿ

10 school vehicles seized for violating traffic rules

ಬೆಂಗಳೂರು, ಜು.11-ಉತ್ತರ ವಿಭಾಗದ ಸಂಚಾರ ಪೊಲೀಸರು ಆರ್‌ಟಿಓ ಅಧಿಕಾರಿಗಳ ಸಹಯೋಗದೊಂದಿಗೆ ಕಾರ್ಯಾಚರಣೆ ನಡೆಸಿ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡಿದ 10 ಶಾಲಾ ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಇಂದು ಬೆಳಗ್ಗೆ 6 ಗಂಟೆಯಿಂದ 9 ಗಂಟೆಯವರೆಗೆ ಉತ್ತರ ಸಂಚಾರ ವಿಭಾಗದಲ್ಲಿ ಶಾಲಾ ವಾಹನಗಳ ವಿರುದ್ಧ ವಿಶೇಷ ಕಾರ್ಯಚರಣೆ ನಡೆಸಿ,ಅಧಿಕ ಮಕ್ಕಳನ್ನು ಕರೆದೊಯ್ಯುವುದು, ಮದ್ಯಸೇವನೆ ಮಾಡಿ ವಾಹನ ಚಾಲನೆ ಸೇರಿದಂತೆ ವಿವಿಧ ಸಂಚಾರಿ ನಿಯಮ ಉಲ್ಲಂಘನೆ ಬಗ್ಗೆ ಒಟ್ಟು 771 ವಾಹನಗಳನ್ನು ತಪಾಸಣೆ ಮಾಡಿದ್ದಾರೆ.

ಈ ಪೈಕಿ 6 ಡಿಡಿ ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು 10 ವಾಹನಗಳನ್ನು ಜಪ್ತಿ ಮಾಡಿ, ಆರ್‌ಟಿಓ ಅವರಿಂದ 45 ನೋಟೀಸ್‌‍ ನೀಡಲಾಗಿದೆ ಎಂದು ಉಪ ಪೊಲೀಸ್‌‍ ಆಯುಕ್ತರಾದ ಸಿರಿಗೌರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

Latest News