Friday, March 29, 2024
Homeಬೆಂಗಳೂರುಬೆಂಗಳೂರಿನಲ್ಲಿ 10 ಸಾವಿರ ಸಿಸಿಟಿವಿ ಕ್ಯಾಮೆರಾ: ದಯಾನಂದ

ಬೆಂಗಳೂರಿನಲ್ಲಿ 10 ಸಾವಿರ ಸಿಸಿಟಿವಿ ಕ್ಯಾಮೆರಾ: ದಯಾನಂದ

ಬೆಂಗಳೂರು, ಫೆ.24- ಸೇಫ್ ಸಿಟಿ ಯೋಜನೆಯಡಿ ನಗರದಾದ್ಯಂತ 10 ಸಾವಿರ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ತಿಳಿಸಿದ್ದಾರೆ. ವೈಟ್‍ಫೀಲ್ಡ್ ವಿಭಾಗದ ಇಪಿಐಸಿ ಪ್ರದೇಶದ ಎಸ್‍ಎಪಿ ಲ್ಯಾಬ್‍ನಲ್ಲಿ ನಡೆದ ಮಾಸಿಕ ಜನಸಂಪರ್ಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈಗಾಗಲೇ ನಗರದಲ್ಲಿ ನಿರ್ಭಯ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 667 ಕೋಟಿ ವೆಚ್ಚದಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅವಳವಡಿಸುತ್ತಿದ್ದು, ಈಗಾಗಲೇ 7500 ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳನ್ನು ನಾವು ನಾವು ಕಮಾಂಡ್ ಸೆಂಟರ್‍ನಲ್ಲಿ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಅಭಾವ ತಪ್ಪಿಸಲು ಅಧಿಕಾರಿಗಳಿಗೆ ಸೂಚನೆ

ಸೇಫ್ ಸಿಟಿ ನಿಯಮದಡಿ ನಗರದ ವ್ಯಾಪಾರಿ ಮಳಿಗೆಗಳಲ್ಲೂ ಸಿಸಿ ಟಿವಿ ಕ್ಯಾಮೆರಾ ಅಳವಡಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಭಾಗವಹಿಸಿದ ಸಾರ್ವಜನಿಕರು ಮಹದೇವಪುರ, ಕೆಆರ್‍ಪುರಂ, ಬೆಳ್ಳಂದೂರು, ವರ್ತೂರು ಪ್ರದೇಶಗಳ ಟ್ರಾಫಿಕ್ ಸಮಸ್ಯೆಗಳ ಕುರಿತು ಪ್ರಶ್ನೆಗಳನ್ನು ಕೇಳಿದರು.
ಶಾಲಾ ವಾಹನಗಳು, ಐಟಿ ಕಂಪೆನಿ ಹೊಂದಿರುವ ಪ್ರದೇಶವಾಗಿದ್ದು, ಹೆಚ್ಚು ಖಾಸಗಿ ಕ್ಯಾಬ್ ರಸ್ತೆಯಲ್ಲೇ ಪಾರ್ಕಿಂಗ್ ಮಾಡಿರುತ್ತಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಯುಕ್ತರಿಗೆ ಮನವಿ ಮಾಡಿದರು.

RELATED ARTICLES

Latest News