Friday, November 22, 2024
Homeರಾಜ್ಯಬೋವಿ ನಿಗಮದಲ್ಲಿ 100 ಕೋಟಿ ಅವ್ಯವಹಾರ : ಗೂಳಿಹಟ್ಟಿ ಶೇಖರ್‌ ಗಂಭೀರ ಆರೋಪ

ಬೋವಿ ನಿಗಮದಲ್ಲಿ 100 ಕೋಟಿ ಅವ್ಯವಹಾರ : ಗೂಳಿಹಟ್ಟಿ ಶೇಖರ್‌ ಗಂಭೀರ ಆರೋಪ

ಬೆಂಗಳೂರು, ಜೂ.6– ಬೋವಿ ನಿಗಮದಲ್ಲಿ 100 ಕೋಟಿ ಅವ್ಯವಹಾರ ಆಗಿದೆ ಎಂದು ಬೋವಿ ನಿಗಮದ ಮಾಜಿ ಅಧ್ಯಕ್ಷ, ಮಾಜಿ ಸಚಿವ ಗೂಳಿಹಟ್ಟಿ ಶೇಖರ್‌ ಅವರು ನೂತನ ಸಂಸದ ಕೋಟ ಶ್ರೀನಿವಾಸ್‌ ಪೂಜಾರಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ವಾಯ್ಸ್ ಮೆಸೇಜ್‌ ಮೂಲಕ ಗೂಳಿಹಟ್ಟಿ ಶೇಖರ್‌ ಅವರು,ಉಡುಪಿ-ಚಿಕ್ಕಮಗಳೂರು ನೂತನ ಸಂಸದರಾದ ಕೋಟ ಶ್ರೀನಿವಾಸ್‌ ಪೂಜಾರಿ ಅವರು ಬಸವರಾಜ ಬೊಮ್ಮಾಯಿ ಅವಧಿಯಲ್ಲಿ ಸಚಿವರಾಗಿದ್ದಾಗ ಹಗರಣ ನಡೆದಿದೆ. ಬೋವಿ ನಿಗಮದ ಹಗರಣವನ್ನು ಸಿಐಡಿ ತನಿಖೆಗೆ ನೀಲಾಗಿದೆ. ಪ್ರಕರಣ ಸಂಬಂಧ ಇಬ್ಬರ ಕೊಲೆ ಆಗಿದೆ ಆರೋಪ ಮಾಡಿದ್ದಾರೆ.

ಸಿಬಿಐ ತನಿಖೆ ಬೇಡ, ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಮಾಡಿಸಿ. ಕೋಟ ಶ್ರೀನಿವಾಸ್‌ ಪೂಜಾರಿಯಂಥ ಪ್ರಾಮಾಣಿಕರು ದೇಶದಲ್ಲಿಲ್ಲ. ಈಗ 50-60 ಕೋಟಿ ಆಸ್ತಿ ಮಾಡಿದ್ದು ಎಲ್ಲಿಂದ ಬಂತು? ಎಸ್ಟಿ ನಿಗಮ, ಬೋವಿ ನಿಗಮ ಎಲ್ಲ ಹಗರಣಗಳ ಬಗ್ಗೆ ತನಿಖೆ ಮಾಡಿ. ಸಿದ್ದರಾಮಯ್ಯ ಸಿಎಂ ಆದ ಬಳಿಕ ತನಿಖೆ ಸ್ಥಗಿತ ಆಗಿದೆ.

ಬಿಎಸ್‌ ಯಡಿಯೂರಪ್ಪ ಕೇಸ್‌ ತನಿಖೆ ಮಾಡದೆ ಯಾಕೆ ಮುಚ್ಚಿ ಹಾಕಿದ್ರಿ? ದೂರುದಾರ ಮಹಿಳೆ ಸಾವಿಗೀಡಾದ ಸುದ್ದಿ ಎಲ್ಲೆಡೆ ಬಂದಿದೆ. ಪ್ರಜ್ವಲ್‌ ಕೇಸ್‌ ಮಾತ್ರ ತನಿಖೆ ಮಾಡ್ತೀರಾ ಎಂದು ಶೇಖರ್‌ ಕಿಡಿ ಕಾರಿದ್ದಾರೆ.

ಕೊಟ್ಟ ಸಾಲ ವಾಪಸ್‌ ಕೇಳಿದ್ದಕ್ಕೆ ಕೊಲೆ: ಕೊಟ್ಟ ಸಾಲ ವಾಪಸ್‌ ಕೇಳಿದ್ದಕ್ಕೆ ಕೊಲೆ ಮಾಡಿ ಶವ ಹೂತಿಟ್ಟಿದ್ದಾನೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಶ್ರೕನಿವಾಸನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, 55 ವರ್ಷದ ಸುನಂದಮ್ಮ ಕೊಲೆಯಾದ ದುರ್ದೈವಿ. ಆರೋಪಿ ರವಿಕುಮಾರ್‌ ಒಂದು ವರ್ಷದ ಹಿಂದೆ ಸುನಂದಮ್ಮ ಬಳಿ 20 ಸಾವಿರ ರೂಪಾಯಿ ಸಾಲ ಪಡೆದಿದ್ದಾನೆ.

ವಾಪಸ್‌ ಕೊಟ್ಟಿರಲಿಲ್ಲ. ಆದ್ರೆ, ನಿನ್ನೆ ಸಾಲದ ಹಣ ಕೊಡೋದಾಗಿ ಸುನಂದಮ್ಮನನ್ನು ಆರೋಪಿ ಕರೆದಿದ್ದಾನೆ. ಆರೋಪಿ ರವಿ ಮಾತಿನಂತೆ ಮೃತ ಸುನಂದಮ್ಮ ಟಿ.ಗೊಲ್ಲಹಳ್ಳಿಗೆ ತೆರಳಿದ್ದಾರು ಎಂದು ಹೇಳಿದ್ದಾರೆ.

RELATED ARTICLES

Latest News