GVK ವಿರುದ್ಧ ಸಿಡಿದೆದ್ದ 108 ಅಂಬುಲೆನ್ಸ್ ಸಿಬ್ಬಂದಿಗಳು

Social Share

ಬೆಂಗಳೂರು,ನ.4- ದೇವರು ವರ ಕೊಟ್ಟರೂ ಪೂಜಾರಿ ವರ ಕೊಡ್ತಿಲ್ಲ ಅನ್ನೋ ಹಾಗೆ ವೇತನ ಬಿಡುಗಡೆಗೆ ಸರ್ಕಾರ ಸೂಚನೆ ನೀಡಿದ್ದರೂ ಸಂಬಳ ಬಿಡುಗಡೆ ಮಾಡದೆ ಸತಾಯಿಸುತ್ತಿರುವ ಜಿವಿಕೆ ಸಂಸ್ಥೆ ಆಡಳಿತ ಮಂಡಳಿ ವಿರುದ್ಧ ಮತ್ತೆ ಹೋರಾಟ ನಡೆಸಲು 108 ಅಂಬುಲೆನ್ಸ್ ಸಿಬ್ಬಂದಿಗಳು ತೀರ್ಮಾನಿಸಿದ್ದಾರೆ.

ಕಳೆದ ಎರಡು ತಿಂಗಳಿನಿಂದ ವೇತನ ಬಿಡುಗಡೆ ಮಾಡದಿರು ವುದರಿಂದ ನಾವು ಜೀವನ ಸಾಗಿಸಲು ಆಗುತ್ತಿಲ್ಲ. ಹೀಗಾಗಿ ಜಿವಿಕೆ ಸಂಸ್ಥೆಯನ್ನೇ ವಜಾ ಮಾಡಿ ಎಂದು ಸಿಬ್ಬಂದಿಗಳು ಆಕ್ರೋಶ ಹೊರ ಹಾಕುತ್ತಿದ್ದಾರೆ.
ಈ ಕೂಡಲೇ ನಮ್ಮ ವೇತನ ಬಿಡುಗಡೆ ಮಾಡದಿದ್ದರೆ ಎಲ್ಲ ಸಿಬ್ಬಂದಿಗಳು ಸಾಮೂಹಿಕ ರಜೆ ಹಾಕಬೇಕಾಗುತ್ತದೆ ಎಂದು 108 ನೌಕರರ ಸಂಘದ ಉಪಾಧ್ಯಕ್ಷ ಎನ್.ಹೆಚ್.ಪರಮಶಿವ ಎಚ್ಚರಿಸಿದ್ದಾರೆ.

ಆರೋಗ್ಯ ಸಚಿವ ಸುಧಾಕರ್ ಅವರು ಸಭೆ ನಡೆಸಿ ನಮ್ಮ ವೇತನ ಬಿಡುಗಡೆಗೆ ಆದೇಶಿಸಿದ್ದಾರೆ. ಮಾತ್ರವಲ್ಲ, ಸರ್ಕಾರದಿಂದ 30 ಕೋಟಿ ರೂ.ಗಳಿಗೂ ಹೆಚ್ಚು ಅನುದಾನ ಬಿಡುಗಡೆ ಮಾಡಿದ್ದಾರೆ. ಆದರೆ, ಜಿವಿಕೆ ಸಂಸ್ಥೆಯವರು ವೇತನ ಬಿಡುಗಡೆಗೆ ಹೈದರಾಬಾದ್ನಲ್ಲಿರುವ ಹೆಡ್ ಆಫೀಸ್ನಿಂದ ಅನುಮತಿ ಸಿಕ್ಕಿಲ್ಲ ಎಂದು ಕ್ಯಾತೆ ತೆಗೆಯುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಬಿಬಿಎಂಪಿ ಶಾಲಾ ಶಿಕ್ಷಕರಿಗೆ ‘ಫಾರಿನ್ ಟೂರ್’ ಭಾಗ್ಯ

ಕಳೆದ 13 ವರ್ಷಗಳಿಂದ ನಿರಂತರವಾಗಿ ನಮ್ಮ ಸಿಬ್ಬಂದಿಗಳ ಮೇಲೆ ದಬ್ಬಾಳಿಕೆ ಮಾಡಿಕೊಂಡು ಬರುತ್ತಿರುವ ಜಿವಿಕೆ ಸಂಸ್ಥೆ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಂಡರೆ ನಾವು ಮೂರು ತಿಂಗಳು ಉಚಿತ ಸೇವೆ ಸಲ್ಲಿಸಲು ಸಿದ್ಧರಿದ್ದೇವೆ ಎಂದು ಅವರು ತಿಳಿಸಿದ್ದಾರೆ.

Articles You Might Like

Share This Article