ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ, ಕಾರಿಗೆ ಬಸ್‍ಡಿಕ್ಕಿಯಾಗಿ 11 ಮಂದಿ ಸಾವು

Social Share

ಬೆತುಲ್ , ನ.4 – ವೇಗವಾಗಿ ಬರುತ್ತಿದ್ದ ಕಾರೊಂದು ಎದುರಿಗೆ ಬರುತ್ತಿದ್ದ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 11 ಜನರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯ ಜಲ್ಲಾ ನರ್‍ನಲ್ಲಿ ಇಂದು ಮುಂಜಾನೆ ನಡೆದಿದೆ.

ಬೆಳಗಿನ ಜಾವ 2 ಗಂಟೆ ಸುಮಾರಿಗೆ ಅತಿ ವೇಗವಾಗಿ ಬಂದು ಕಾರು ಪ್ರಯಾಣಿಕರಿಲ್ಲದ ಖಾಲಿ ಬಸ್‍ಗೆ ಡಿಕ್ಕಿ ಹೊಡೆದಿದೆ .ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ ಎಂದು ಬೆತುಲ್ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್‍ಸ್ಪೆಕ್ಟರ್ ಶಿವರಾಜ್ ಸಿಂಗ್ ಠಾಕೂರ್ ತಿಳಿಸಿದ್ದಾರೆ.

ಆರು ಪುರುಷರು, ಮೂವರು ಮಹಿಳೆಯರು, ಸುಮಾರು ಐದು ವರ್ಷದ ಬಾಲಕಿ ಮತು ಪುಟ್ಟ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ , ಮೃತರು ಮಹಾರಾಷ್ಟ್ರದ ಅಮರಾವತಿಯಿಂದ ವಾಪಸ್ ಆಗುತ್ತಿದ್ದರು ಎಂದು ತಿಳಿದುಬಂದಿದೆ.

ಇದು ಘನಘೋರ : ಸಕಾಲದಲ್ಲಿ ಚಿಕಿತ್ಸೆ ಸಿಗದೇ ತಾಯಿ ಮತ್ತು ಅವಳಿ ನವಜಾತ ಶಿಶುಗಳ ಸಾವು

ಅಪಘಾತದ ತೀವ್ರತೆ ಎಷ್ಟಿತ್ತೆಂದರೆ, ಗ್ಯಾಸ್ ಕಟ್ಟರ್ ಬಳಸಿ ವಾಹನ ಭಾಗವನ್ನು ಕತ್ತರಿಸಿ ಮೃತ ದೇಹಗಳನ್ನು ಹೊರಗೆ ತೆಗೆಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. 

ಪ್ರಾಥಮಿಕ ತನಿಖೆಯ ಪ್ರಕಾರ ಚಾಲಕ ನಿದ್ದೆ ಮಂಪರಿನಲ್ಲಿ ವಾಹನ ಚಾಲಾಯಿಸಿದ್ದ ಕಾರಣ ಈ ಅಪಘಾತ ಸಂಭವಿಸಿದೆ.ಮೃತರಲ್ಲಿ ಕೆಲವರು ಮೇಲ್ನೋಟಕ್ಕೆ ಕಾರ್ಮಿಕರಂತೆ ಕಾಣುತ್ತಿದ್ದು ತನಿಖೆ ಮುಂದುವರೆದಿದೆ.

Articles You Might Like

Share This Article